ಹೈದರಾಬಾದ್‌ನಲ್ಲಿ(Hyderabad) ಮರ್ಸಿಡಿಸ್ ಕಾರಿನಲ್ಲಿ ಅಪ್ರಾಪ್ತ ಬಾಲಕಿಗೆ ಮೂರ್ನಾಲ್ಕು ಮಂದಿ ಸೇರಿಕೊಂಡು ಕಿರುಕುಳ ನೀಡಿ ಸಾಮೂಹಿಕ ಅತ್ಯಾಚಾರ(Gang Rape) ಎಸಗಿದ್ದಾರೆ.

ಘಟನೆಯಲ್ಲಿ ಶಾಸಕರ ಪುತ್ರ ಹಾಗೂ ಅಪ್ರಾಪ್ತರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜೂನ್ 1, ಬುಧವಾರದಂದು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸತ್ಯಾಸತ್ಯತೆಗಳನ್ನು ಪರಿಶೀಲಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಶನಿವಾರ ನಡೆದಿದ್ದು, ಆರಂಭದಲ್ಲಿ ಘಟನೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 354 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
17 ವರ್ಷದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಪೊಲೀಸರು ಇದೀಗ ಪ್ರಕರಣವನ್ನು ಬದಲಾಯಿಸಿ ಐಪಿಸಿಯ ಸೆಕ್ಷನ್ 376 (ಗ್ಯಾಂಗ್ ರೇಪ್) ಅನ್ನು ಸೇರಿಸಿದ್ದಾರೆ.ಶಾಸಕರ ಪುತ್ರ ಮತ್ತು ಅಲ್ಪಸಂಖ್ಯಾತ ಮಂಡಳಿಯ ಅಧ್ಯಕ್ಷರು ಪಾರ್ಟಿಯಲ್ಲಿ ಹಾಜರಿದ್ದರು ಮತ್ತು ಹುಡುಗಿಯ ಜೊತೆಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಅತ್ಯಚಾರಕ್ಕೊಳಗಾದ ಯುವತಿ ಒಬ್ಬ ಅಪ್ರಾಪ್ತ ಆರೋಪಿಯನ್ನು ಮಾತ್ರ ಗುರುತಿಸಲು ಮತ್ತು ಹೆಸರಿಸಲು ಸಾಧ್ಯವಾಗಿದೆ.

ಆತನು ಕೂಡ ಹದಿಹರೆಯದ ಯುವಕನಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿ ಸಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.