• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ; ಈ ರಾಜ್ಯದಲ್ಲಿ ಗೃಹ ಇಲಾಖೆ ಇದೆಯೇ? – ವಿಪಕ್ಷಗಳಿಂದ ಟೀಕೆ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಗೂಂಡಾಗಿರಿ ಮಾಡ್ತಿರೋ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ
0
SHARES
20
VIEWS
Share on FacebookShare on Twitter

Bangalore: ಬೆಂಗಳೂರಿನ ಕೆ.ಆರ್ ಮಾರ್ಕೆಟ್ (KR Market) ಬಳಿ ರಾತ್ರಿ 11:30 ವೇಳೆಯಲ್ಲಿ ಬಸ್ಗಾಗಿ ಕಾಯುತ್ತಾ ನಿಂತಿದ್ದ ಮಹಿಳೆಯ ಮೇಲೆ ಅಪರಿಚಿತರಿಬ್ಬರು ಅತ್ಯಾಚಾರ ನಡೆಸಿ, ಮಹಿಳೆಯ ಬಳಿಯಿದ್ದ ಚಿನ್ನಾಭರಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು. ಎರಡು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಯ ಪೊಲೀಸರು (Police from Mahila Station) ಯಶಸ್ವಿಯಾಗಿದ್ಧಾರೆ. ಗಣೇಶ್, ಶರವಣ ಬಂಧಿತ ಆರೋಪಿಗಳಾಗಿದ್ದು, ಕೆ.ಆರ್ ಮಾರ್ಕೆಟ್ನಲ್ಲಿಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

Gang rape of woman in Bangalore

ಘಟನೆಯ ಖಂಡಿಸಿ ರಾಜ್ಯ ಸರ್ಕಾರದ (State Govt) ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಬಿವೈ ವಿಜಯೇಂದ್ರ (BY Vijayendra) ಅವರು, ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ (Karnataka) ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ (Bangalore KR Market) ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ (State law and order) ಬಂದು ತಲುಪಿದೆ. ಕೇವಲ ರಾಜ್ಯ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ಟೀಕಿಸಿವೆ.

ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ, ಕನಿಷ್ಠ ಕಾನೂನು ಸುರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಒಳಪಡಿಸಲಿ. ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿವೆ.

Tags: bengalurubjpBY VijayandraCongressKarnatakaKR MarketSiddaramaiahState Govt

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.