ಮಧ್ಯಪ್ರದೇಶ : ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ (Madhyapradesh) ಗ್ವಾಲಿಯರ್(Gwalior) ನಗರದಲ್ಲಿ ಇಬ್ಬರು ವ್ಯಕ್ತಿಗಳು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ(Rape) ಮತ್ತು ಆ ಕೃತ್ಯವನ್ನು ತನ್ನ ಸ್ನೇಹಿತರಿಗೆ ಲೈವ್ ವೀಡಿಯೋ(Live Video) ಮಾಡುವ ಮೂಲಕ ತೋರಿಸಿದ್ದಾನೆ ಎಂದು ಪೊಲೀಸರು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಪ್ರಭಾರಿ ರಾಜೀವ್ ಗುಪ್ತಾ ಮಾಹಿತಿ ನೀಡಿದ್ದಾರೆ. ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಸುಮಾರು 21 ವರ್ಷದ ವಯಸ್ಸಿನ ಇಬ್ಬರು ವ್ಯಕ್ತಿಗಳು ತನ್ನನ್ನು ಹೋಟೆಲ್ಗೆ ಕರೆದೊಯ್ದು ಜೂನ್ 2 ರಂದು ಸಾಮೂಹಿಕ ಅತ್ಯಾಚಾರ(Gang Rape) ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದಾಳೆ. “ದೂರುದಾರರ ಪ್ರಕಾರ, ಆರೋಪಿಗಳು ಈ ಕೃತ್ಯವನ್ನು ಸ್ನೇಹಿತರಿಗೆ ಲೈವ್-ಸ್ಟ್ರೀಮ್ ಮಾಡಿದರು ಎಂದು ಹೇಳಲಾಗಿದೆ.
ಫೋಟೋಗಳು ಮತ್ತು ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಮತ್ತು ನಂತರ ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಆರೋಪಿಗಳು ಪರಾರಿಯಾಗಿದ್ದಾರೆ” ಎಂದು ಗುಪ್ತಾ ಹೇಳಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ದೇಶದಲ್ಲಿ ಕಳೆದ 2 ತಿಂಗಳ ಅವಧಿಯಲ್ಲಿ ಅತೀ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ ಎಂಬುದು ತೀವ್ರ ಶೋಚನಿಯ! ಈ ಬಗ್ಗೆ ಸೂಕ್ತ ನಿರ್ಧಾರವನ್ನು ಸರ್ಕಾರ ಮಾಡವುದು ಒಳಿತು. ಅತ್ಯಾಚಾರ ಎಸಗುವ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಗಳನ್ನು ನೀಡಬೇಕು ಇಲ್ಲವಾದರೆ ಮರಣದಂಡನೆ ವಿಧಿಸಬೇಕು!