ಟ್ಯೂಶನ್ ಮುಗಿಸಿ ಹಿಂತಿರುಗುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್: ಬಾಲಕಿ ಆತ್ಮಹತ್ಯೆ…!

ಮೀರತ್ : ಟ್ಯೂಶನ್ ಮುಗಿಸಿ ಮನೆಗೆ ಮರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಅಪಹರಿಸಿ, ಅತ್ಯಾಚಾರ ಎಸಗಿರುವ ಘಟನೆ ಗುರುವಾರದಂದು ಮೀರತ್​ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಸರ್ದಾನ ಕೋಟ್ವಾಲಿ ಪ್ರದೇಶಕ್ಕೆ ಸೇರಿದ ಬಾಲಕಿ ಮನೆಗೆ ಮರಳಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿಯ ಮನೆಯ ಬಳಿಯೇ ಇರುವ ಟವರ್ ಒಂದರ ಬಳಿ ಕಾಪಸಾಡ್ ಗ್ರಾಮದ ನಾಲ್ವರು ಯುವಕರು ಬಾಲಕಿಯನ್ನು ಅಪಹರಿಸಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಮೀರತ್​ನ ಸೂಪರಿಂಟೆಂಡೆಂಟ್ ಆಫ್ ಪೋಲೀಸ್ ಕೇಶವ್ ಕುಮಾರ್ ತಿಳಿಸಿದ್ದಾರೆ. ಬಾಲಕಿ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಅದರಲ್ಲಿ ಬರೆದಿರುವಂತೆ 4 ದುಷ್ಕರ್ಮಿಗಳಲ್ಲಿ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ದುರ್ಘಟನೆ ನಡೆದ ನಂತರ ಬಾಲಕಿ ಮನೆಗೆ ತೆರಳಿ ಘಟನೆಯ ಕುರಿತು ತನ್ನ ಪೋಷಕರಿಗೆ ಎಲ್ಲಾ ವಿಚಾರವನ್ನೂ ತಿಳಿಸಿದ್ದಾಳೆ. ಸ್ವಲ್ಪ ಸಮಯದ ಬಳಿಕ ವಿಷ ಸೇವಿಸಿದ್ದಾಳೆ. ಆಕೆ ವಿಷ ಸೇವಿಸಿರುವುದು ತಿಳಿಯುತ್ತಿದ್ದಂತೆ ಪೋಷಕರು ಮಗಳನ್ನು ಮೋದಿಪುರಂನ ಗ್ಲೋಬಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಎಸ್​ಪಿ ಕೇಶವ್ ಕುಮಾರ್ ತಿಳಿಸಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.