ಬಂಟ್ವಾಳ ಅ.9 : ಬಂಟ್ವಾಳ ತಾಲೂಕಿನ ಅಮ್ಯಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಆಕೆಗೆ ಮತ್ತು ಬರಿಸುವ ಔಷಧಿ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ಸೇರಿ ಗ್ಯಾಂಗ್ ರೇಟ್ ನಡೆಸಿದ್ದಾರೆ ಎನ್ನಲಾಗುತ್ತಿದೆ. ಎಂಟ್ವಾಳದ ಎಸ್. ವಿ. ಎಸ್. ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಯನ್ನು ಪರಿಚಿತರೇ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಿದ್ದಾರೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಯಾಡಿಯಲ್ಲಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪವೊಂದು ಕೇಳಿಬಂದಿದೆ. ಈ ಬಗ್ಗೆ ಸ್ವತಃ ಬಾಲಕಿಯೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಅಲ್ಲದೆ ಐವರು ಕಾಮುಕರ ಹೆಸರನ್ನು ಕೂಡ ತಿಳಿಸಿದ್ದಾಳೆ
ಐವರು ಆರೋಪಿಗಳು ಬಿಳಿ ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಿದ್ದು, ಐಪಿಸಿ ಸೆಕ್ಷನ್ 366(A), 376(D), 506 ಮತ್ತು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಕಾಮುಕರ ಪತ್ತೆಗೆ ಪೊಲೀಸರು ಎರಡು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದು, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರು ತಲೆಮರೆಸಿಕೊಂಡಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ಕೃತ್ಯದ ಹೆಚ್ಚಿನ ವಿವರಗಳು ಲಭ್ಯವಾಗಲಿವೆ. ಬಾಲಕಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.