ಪಾದಚಾರಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಬೆಂಗಳೂರಿನಲ್ಲಿ (GBA clearing footpath encroachments) ಫುಟ್‌ಪಾತ್‌ಗಳು ಸಂಚಾರ ಮುಕ್ತ
ಸುರಕ್ಷಿತ ಪಾದಚಾರಿ ಮಾರ್ಗ’ ಅಭಿಯಾನಕ್ಕೆ ಚಾಲನೆ: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ತೆರವು ಕಾರ್ಯ
ನಗರದ ಐದು ವಲಯಗಳಲ್ಲಿ ಹಂತ ಹಂತವಾಗಿ ಅತಿಕ್ರಮಣ ತೆರವು; ಮತ್ತೆ ಒತ್ತುವರಿ ಆಗದಂತೆ ಕಟ್ಟೆಚ್ಚರ
Bengaluru : ನಗರದ ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಅಡೆತಡೆರಹಿತ ಸಂಚಾರ ವ್ಯವಸ್ಥೆ (GBA clearing footpath encroachments) ಕಲ್ಪಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ‘ಸುರಕ್ಷಿತ ಪಾದಚಾರಿ ಮಾರ್ಗ’ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದೆ.
ಬುಧವಾರ ಬೆಳಗ್ಗೆಯಿಂದಲೇ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಫುಟ್‌ಪಾತ್‌ಗಳ (Footpath) ಮೇಲಿನ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಸಾರ್ವಜನಿಕ ಸ್ಥಳಗಳನ್ನು ಮತ್ತೆ ಪಾದಚಾರಿಗಳ ಬಳಕೆಗೆ ಮುಕ್ತಗೊಳಿಸುವ ಕಾರ್ಯಕ್ಕೆ ವೇಗ ಸಿಕ್ಕಿದೆ.

ಇತ್ತೀಚಿನ ದಿನಗಳಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಅಂಗಡಿಗಳ (GBA clearing footpath encroachments) ವಸ್ತುಗಳು, ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಗೂ ಅನಧಿಕೃತ ಅತಿಕ್ರಮಣಗಳು ಹೆಚ್ಚಾಗಿದ್ದರಿಂದ ಸಾರ್ವಜನಿಕರು ರಸ್ತೆ ಮೇಲೆಯೇ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಅಧಿಕಾರಿಗಳು ಸಮಗ್ರ ಯೋಜನೆ ರೂಪಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಈ ಅಭಿಯಾನಕ್ಕೆ ಹಿನ್ನೆಲೆಯಾಗಿ ರಾಜ್ಯ ಸರ್ಕಾರವು ಇತ್ತೀಚೆಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿತ್ತು. ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯ ಐದು ನಗರ ನಿಗಮ ಪ್ರದೇಶಗಳಲ್ಲಿರುವ ಪಾದಚಾರಿ ಮಾರ್ಗಗಳನ್ನು ಸಂಪೂರ್ಣವಾಗಿ ಅತಿಕ್ರಮಣ ಮುಕ್ತಗೊಳಿಸುವಂತೆ ಸೂಚಿಸಲಾಗಿತ್ತು.
ಅದರಂತೆ ಟ್ರಿನಿಟಿ (Trinity) ಜಂಕ್ಷನ್‌ನಿಂದ ಎಂಜಿ ರಸ್ತೆ ಪಾರ್ಕ್‌ವರೆಗೆ, 100 ಅಡಿ ಇಂದಿರಾನಗರ ರಸ್ತೆಯಿಂದ ದೊಮ್ಮಲೂರು ಫ್ಲೈಓವರ್‌ವರೆಗೆ, ವಿವೇಕಾನಂದ ಮೆಟ್ರೋ
ನಿಲ್ದಾಣದಿಂದ ಬೆನ್ನಿಗಾನಹಳ್ಳಿ ರೈಲ್ವೆ ಸೇತುವೆಯವರೆಗೆ, ಅಶೋಕ ಪಿಲ್ಲರ್‌ನಿಂದ ಮಾಧವನ್ ಪಾರ್ಕ್‌ವರೆಗೆ, ಜಯನಗರದ 8ನೇ ಹಾಗೂ 9ನೇ ಮುಖ್ಯರಸ್ತೆ, ಆರ್‌ವಿ ರಸ್ತೆಯ
ಟೀಚರ್ಸ್ ಕಾಲೇಜಿನಿಂದ ಸೌತ್ ಎಂಡ್ ಸರ್ಕಲ್‌ವರೆಗೆ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಹಂತ ಹಂತವಾಗಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ನಗರದ ವಿವಿಧ ವಲಯಗಳಲ್ಲಿ ಇದೇ ಮಾದರಿಯ ಕಾರ್ಯ ಮುಂದುವರಿಯಲಿದ್ದು, ಸಾರ್ವಜನಿಕರಿಗೆ ಸುರಕ್ಷಿತ ನಡೆಪಥ ಒದಗಿಸುವುದು ಪ್ರಮುಖ ಗುರಿಯಾಗಿದೆ.
ಈ ವಿಶೇಷ ಕಾರ್ಯಾಚರಣೆ ಬೆಳಿಗ್ಗೆ 9.30ರಿಂದ ಆರಂಭವಾಗಿದ್ದು, ಜೆಸಿಬಿ ಯಂತ್ರಗಳ ನೆರವಿನಿಂದ ಅತಿಕ್ರಮಣ ತೆರವು ಮಾಡಲಾಗುತ್ತಿದೆ. ಸ್ಥಳೀಯ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ವಿಶೇಷವಾಗಿ ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಅಂಗಡಿಗಳ ಮುಂಭಾಗದಲ್ಲಿ ಇಡಲಾಗಿದ್ದ ವಸ್ತುಗಳು, ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಗೂ ಸಾರ್ವಜನಿಕರಿಗೆ ಅಡ್ಡಿಯಾಗಿದ್ದ ವಿವಿಧ ಅನಧಿಕೃತ ಅತಿಕ್ರಮಣಗಳನ್ನು ತೆರವುಗೊಳಿಸಲಾಗಿದೆ.
ಅಧಿಕಾರಿಗಳು ಪಾದಚಾರಿಗಳ ಸಂಚಾರಕ್ಕೆ ತೊಂದರೆ ಉಂಟುಮಾಡುವ ಯಾವುದೇ ಅಡೆತಡೆಯನ್ನೂ ಸಹಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಅಭಿಯಾನವನ್ನು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಮತ್ತು ನಿಯಂತ್ರಣ ಸಂಬಂಧಿತ ಕಾನೂನುಗಳ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಜಾರಿಗೊಳಿಸಲಾಗುತ್ತಿದೆ.
ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಬೀದಿ ವ್ಯಾಪಾರಿಗಳ ಹಕ್ಕುಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕ ಹಿತಾಸಕ್ತಿ ಮತ್ತು ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.
ಅತಿಕ್ರಮಣ ತೆರವುಗೊಳಿಸಿದ ಬಳಿಕ ಅದೇ ಸ್ಥಳದಲ್ಲಿ ಮತ್ತೆ ಅನಧಿಕೃತವಾಗಿ ಒತ್ತುವರಿ ಆಗದಂತೆ ನಿರಂತರ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯವಿದ್ದರೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮವೂ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ನಗರದಲ್ಲಿ ವಾಹನಗಳ ಸಂಖ್ಯೆಯ ಜೊತೆಗೆ ಪಾದಚಾರಿಗಳ ಸಂಚಾರವೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತ ಫುಟ್‌ಪಾತ್‌ಗಳ ಅಗತ್ಯತೆ ಮತ್ತಷ್ಟು ಮಹತ್ವ ಪಡೆದಿದೆ.
ಈ ಅಭಿಯಾನ ಯಶಸ್ವಿಯಾದರೆ ಶಾಲಾ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ದಿವ್ಯಾಂಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ನಗರವನ್ನು ಸುಗಮ, ಸುರಕ್ಷಿತ ಮತ್ತು ಪಾದಚಾರಿ ಸ್ನೇಹಿ ನಗರವನ್ನಾಗಿ ರೂಪಿಸುವ ದಿಸೆಯಲ್ಲಿ ಈ ಕ್ರಮ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ. ಸಾರ್ವಜನಿಕರೂ ಸಹ
ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಜಾಗೃತಿ ವಹಿಸಿ, ನಗರವನ್ನು ಸ್ವಚ್ಛ ಹಾಗೂ ವ್ಯವಸ್ಥಿತವಾಗಿಡಲು ಆಡಳಿತದೊಂದಿಗೆ ಸಹಕರಿಸುವುದು ಅಗತ್ಯವಾಗಿದೆ.
ಇದನ್ನು ಓದಿ : https://vijayatimes.com/nice-road-electronic-city-toll-hike/