Visit Channel

ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣ: ಕ್ವಾರಿ ಮಾಲೀಕ ಅರೆಸ್ಟ್

pro

ಚಿಕ್ಕಬಳ್ಳಾಪುರ, ಫೆ. 25: ಜಿಲ್ಲೆಯ ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಪೋಟಗೊಂಡು ಆರು ಜನ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕ್ವಾರಿ ಮಾಲೀಕ ನಾಗರಾಜ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನೆರೆಯ ತಮಿಳುನಾಡಿನ ಹೊಸೂರು ಬಳಿ ಆರೋಪಿ ನಾಗರಾಜ್ ಹಾಗೂ ಬ್ಲಾಸ್ಟರ್ ಗಣೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಕ್ವಾರಿ ಮಾಲೀಕರಾದ ರಾಘವೇಂದ್ರ ರೆಡ್ಡಿ ಹಾಗೂ ವೆಂಕಟಶಿವಾರೆಡ್ಡಿ ಸಹಿತ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನೆಗೆ ಸಂಬಂಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಫೆಬ್ರವರಿ 7 ಪ್ರಕರಣ ದಾಖಲಿಸಿದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ ಮತ್ತು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಂಜುನಾಥ್ ಸಬ್ ಇನ್ಸ್ ಪೆಕ್ಟರ್ (ಪಿಎಸ್‌ಐ) ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.