Visit Channel

ಕೊರೊನಾ ಚೇತರಿಕೆ ಬಳಿಕ ಲಸಿಕೆ ಪಡೆದುಕೊಂಡರೆ ಹತ್ತು ಪಟ್ಟು ರೋಗನಿರೋಧಕ ಶಕ್ತಿ ಹೆಚ್ಚು

5vaccine-1620145933

ಹೈದರಾಬಾದ್‌, ಜೂ. 12: ಕೊರೊನಾ ಸೋಂಕಿಗೆ ಒಳಗಾಗದೇ, ಮೊದಲ ಡೋಸ್ ಲಸಿಕೆ ಪಡೆದವರಿಗೆ ಹೋಲಿಸಿದರೆ, ಒಂದು ಬಾರಿ ಕೊರೊನಾ ಸೋಂಕಿಗೆ ಒಳಗಾದ ಬಳಿಕ ಮೊದಲ ಡೋಸ್ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಮತ್ತು ಸ್ಮರಣ ಜೀವಕೋಶಗಳ ಪ್ರತಿಕ್ರಿಯೆ 10 ಪಟ್ಟು ಹೆಚ್ಚಿದೆ. ಒಂದು ವರ್ಷಗಳ ಕಾಲ ಈ ಪ್ರತಿಕಾಯಗಳು ವೈರಾಣು ವಿರುದ್ಧ ಹೋರಾಡುತ್ತವೆ ಎಂದು ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೊಯೆಂಟೆರಾಲಜಿ (ಎಐಜಿ) ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ.

ಹೀಗಾಗಿ, ಕೊರೊನಾ ಸೋಂಕಿಗೆ ಒಳಗಾಗದವರು ಎರಡನೇ ಡೋಸ್‌ ಲಸಿಕೆಯನ್ನು ಈಗ ಆದ್ಯತೆ ಮೇರೆಗೆ ತೆಗೆದುಕೊಳ್ಳಬೇಕು. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಮೊದಲ ಡೋಸ್‌ ಪಡೆದುಕೊಂಡವರು ಮುಂದಿನ ವರ್ಷ ಎರಡನೇ ಡೋಸ್‌ ತೆಗೆದುಕೊಳ್ಳಬಹುದು ಎಂದು ಎಐಜಿ ಹೇಳಿದೆ.

ಐಸಿಎಂಆರ್‌ ಗುರುತಿಸಿರುವ ಕೋವಿಡ್‌–19 ಆರೈಕೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದ 280 ಆರೋಗ್ಯ ಕಾರ್ಯಕರ್ತರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರೆಲ್ಲರೂ ಜನವರಿಯಿಂದ ಫೆಬ್ರುವರಿ ಒಳಗೆ ಕೋವಿಡ್‌ ಲಸಿಕೆ ಪಡೆದಿದ್ದರು. ಅವರಲ್ಲಿ 131 ಕಾರ್ಯಕರ್ತರಿಗೆ ಲಸಿಕೆ ಪಡೆಯುವ ಮುನ್ನ ಕೊರೊನಾ ಸೋಂಕು ದೃಢವಾಗಿತ್ತು. ಆ ಕಾರ್ಯಕರ್ತರ ದೇಹದಲ್ಲಿ ಪ್ರತಿಕಾಯಗಳು 10 ಪಟ್ಟು ಹೆಚ್ಚಾಗಿರುವುದು ಕಂಡುಬಂದಿದೆ ಎಂದು ಎಐಜಿ ಸಂಶೋಧಕರು ಮತ್ತು ಆಸ್ಪತ್ರೆ ಅಧ್ಯಕ್ಷ ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಈ ಸಂಶೋಧನೆ ಇಂಟರ್‌ನ್ಯಾಷನಲ್‌ ಜರ್ನಲ್‌ ಆಫ್‌ ಇನ್‌ಫೆಕ್ಷಿಯಸ್‌ ಡಿಸೀಸ್‌ ನಿಯತಕಾಲಿಕದಲ್ಲಿ ಪ್ರಕಟವಾಗಿದೆ. ದೇಶದಲ್ಲಿ ಕೋವಿಡ್‌ ಲಸಿಕೆಗಳ ಕೊರತೆ ಇರುವಾಗಲೇ ಈ ಶಿಫಾರಸ್ಸು ಹೊರಬಿದ್ದಿದೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.