ಗೋವಾದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ

ಪಣಜಿ ಡಿ 17 : ಗೋವಾದಲ್ಲಿ ಬಿಜೆಪಿಗೆ ಮತ್ತೊಂದು ಆಘಾತವಾಗಿದೆ ಗೋವಾದ ಮಾಜಿ ಸಚಿವೆ ಬೆಜೆಪಿಗೆ ಗುಡ್‌ ಬೈ ಹೇಳಿ AAPಯತ್ತ ಮುಖಮಾಡಿದ್ದಾರೆ.  69 ವರ್ಷ ವಯಸ್ಸಿನ ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮನೋಹರ್ ಪರಿಕ್ಕರ್ ಸಂಪುಟದಲ್ಲಿ ಸಚಿವರಾಗಿದ್ದ ಅಲೀನಾ ಗೋವಾ ವಿಧಾನಸಭೆಯ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಸದ್ಯ ಸಲ್ದಾನಾ ರಾಜಿನಾಮೆ ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ. ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿಯಾಗಿದ್ದಾರೆ. ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.

ಈ ಬೆಳವಣಿಗೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಸಲ್ದಾನಾ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾರೆ. “ಶಾಸಕಿ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಲಾಗುವುದು” ಎಂದು ಪ್ರಕಟಿಸಿದ್ದಾರೆ. ಆದರೆ ಸ್ಪೀಕರ್ ರಾಜೇಶ್ ಪಠಾಣ್ ಕರ್ ಇನ್ನೂ ರಾಜೀನಾಮೆಯನ್ನು ಸ್ವೀಕರಿಸಿಲ್ಲ.

“ಮೌಲಿಕ ಕಾರಣಕ್ಕಾಗಿ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷ ಬಹುಶಃ ಎಲ್ಲ ತತ್ವಗಳನ್ನು ಮರೆತಿದೆ ಹಾಗೂ ರಾಜ್ಯದ ಸ್ಥಿತಿ ದಯನೀಯವಾಗಿದೆ. ಪಕ್ಷಕ್ಕೆ ಯಾರು ಬರುತ್ತಿದ್ದಾರೆ ಹಾಗೂ ಪಕ್ಷದಿಂದ ಯಾರು ಹೊರಹೋಗುತ್ತಿದ್ದಾರೆ ಎನ್ನುವುದು ಯಾರಿಗೂ ತಿಳಿದಿಲ್ಲ” ಎಂದು ಸಲ್ದಾನಾ ಹೇಳಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.