Goa : ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಇಂದು ಗೋವಾದಲ್ಲಿ ಬಿಜೆಪಿ ಸೇರುವ ಸಾಧ್ಯತೆ!

Goa : ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು(Congress MLA) ಇಂದು ಗೋವಾದಲ್ಲಿ(Goa) ಬಿಜೆಪಿ(BJP) ಸೇರಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ತಿಳಿಸಿದ್ದಾರೆ.

ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮೂವರು ಶಾಸಕರಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರುವ ಸಾಧ್ಯತೆಯಿರುವ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : https://vijayatimes.com/dinesh-gundurao-defends-siddaramaiah/

ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ(ANI) ವರದಿ ಮಾಡಿದೆ. ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಈ ಬೆಳವಣಿಗೆಯ ಬಗ್ಗೆ ಈ ಹಿಂದೆ ಸುಳಿವು ನೀಡಿದ್ದರು.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು.

ಜುಲೈ 2019 ರಲ್ಲಿ ಇದೇ ರೀತಿಯ ಕ್ರಮದಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬದಲಾದರು. ಸದ್ಯ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರಾದ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್,

ಇದನ್ನೂ ಓದಿ : https://vijayatimes.com/tips-to-care-brain-health/

ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಬಿಜೆಪಿ ಸೇರಲಿದ್ದಾರೆ ಎಂಬುದು ವದಂತಿಯಾಗಿದೆ. ಅಧಿಕೃತವಾಗಿ ತಿಳಿಯಲು ಕಾದು ನೋಡಬೇಕಿದೆ!

Source : India Today

Exit mobile version