ಬೆಂಗಳೂರು ಜ 10 : ಚಿನ್ನ ಬೆಳ್ಳಿ ಕೊಂಡುಕೊಳ್ಲುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು ಕೊರನಾ ಹಿನ್ನಲೆಯಲ್ಲಿ ಚಿನ್ನ ಬೆಳ್ಳಿದರದಲ್ಲಿ ಗಣನೀಯ ಇಳಿಕೆಯಾಗಿದೆ. ಕಳೆದ ಕೆಲವು ತಿಂಗಳಿನಿಂದ ಸಾಕಷ್ಟು ಏರಿಕೆಯಾಗಿದ್ದ ಚಿನಗನ ಬೆಳ್ಳಿ ದರ 3500 ರೂಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಹೀಗಿದೆ : ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,900 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 60,400 ರೂಪಾಯಿ ನಿಗದಿಯಾಗಿದೆ. ಎಂದು ಮಾರುಕಟ್ಟೆ ಮೂಲಗಳು ಸ್ಪಷ್ಟಪಡಿಸಿವೆ.