• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಗಗನಕ್ಕೇರಿದ ಬೆಳ್ಳಿ ದರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಗಗನಕ್ಕೇರಿದ ಬೆಳ್ಳಿ ದರ
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 16: ಭಾರತದಲ್ಲಿ ಎರಡು ದಿನಗಳ ಹಿಂದೆ ಇಳಿಕೆಯಾಗಿದ್ದ ಚಿನ್ನದ ಬೆಲೆ, ಇಂದು ಮತ್ತೆ ಏರಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,000 ರೂ. ದಾಟಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 50,620 ರೂ. ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 46,400 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, 2 ದಿನಗಳ ಹಿಂದೆ 68 ಸಾವಿರವಿದ್ದ ಬೆಳ್ಳಿ ಬೆಲೆ 70 ಸಾವಿರಕ್ಕೇರಿದೆ.

ಭಾರತದಲ್ಲಿ 2 ದಿನಗಳ ಹಿಂದೆ 46,340 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 46,400 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 50,620 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,290 ರೂ. ಆಗಿದೆ. ಹಾಗೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 44,250 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 69 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 70,200 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಇಂದು 70,200 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 74,000 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.