Gold Price Today: ಏರಿಕೆ ಕಂಡ ಚಿನ್ನದ ಬೆಲೆ. ಇಳಿಕೆ ಕಂಡ ಬೆಳ್ಳಿ ದರ

ಬೆಂಗಳೂರು, ಫೆ. 01: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದಿನೇ ದಿನೇ ವ್ಯತ್ಯಾಸವಾಗುತ್ತಲೇ ಇದೆ. ಇಂದೂ ಸಹ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ. ನಿನ್ನೆ 22 ಕ್ಯಾರೆಟ್​​ನ 10 ಗ್ರಾಂ ಚಿನ್ನಕ್ಕೆ 47,950 ಇತ್ತು. ಇಂದು 47, 960 ಆಗಿದ್ದು, ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. ನಿನ್ನೆ 48,950 ರೂ ಇದ್ದ ಚಿನ್ನ ಇಂದು 48,960 ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಇಂದು 49,960 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,810 ರೂ. ಆಗಿದೆ. ಭಾರತದಲ್ಲಿ ನಿನ್ನೆ 47,950 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 47,960 ಆಗಿದೆ. 2 ದಿನಗಳ ಹಿಂದೆ 49 ಸಾವಿರ ರೂ. ಇದ್ದ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,960 ರೂ. ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 49,960 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,810 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.


ಇಳಿಕೆ ಕಂಡ ಬೆಳ್ಳಿ ಬೆಲೆ:

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ನಿನ್ನೆ 70 ಸಾವಿರ ಇದ್ದ 10 ಕೆಜಿ ಬೆಳ್ಳಿ ಬೆಲೆ ಇಂದು 69,800 ಆಗಿದೆ. ಬೆಂಗಳೂರಿನಲ್ಲಿ 10 ಕೆ.ಜಿ ಬೆಳ್ಳಿ ಬೆಲೆ 70,300 ಇದ್ದರೆ, ಚೆನ್ನೈ ಮತ್ತು ಹೈದ್ರಾಬಾದ್​​ನಲ್ಲಿ 74,600 ಇದೆ. ದೆಹಲಿ, ಕೊಲ್ಕತ್ತಾ, ಕೇರಳ, ಮತ್ತು ಮುಂಬೈನಲ್ಲಿ 69,800 ಇದೆ. ಬಹುತೇಕ ನಗರಗಳಲ್ಲಿ ಇದೇ ಬೆಲೆ ಇದೆ. ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ.

ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

Exit mobile version