ಎಲ್‌ಎಲ್‌ಬಿ ಪದವಿ (LLB degree) ಮುಗಿಸಿ ಸರ್ಕಾರಿ ಕೆಲಸಕ್ಕೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಬಹಳ ಉಪಯುಕ್ತ ಮಾಹಿತಿ ಇಲ್ಲಿದೆ. ಅಲಹಾಬಾದ್ ಹೈಕೋರ್ಟ್ (High Court) ಈ ಅಭ್ಯರ್ಥಿಗಳಿಗೆ ಸಂಶೋಧನಾ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. (golden opportunity for candidates) ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ exam.nta.ac.in/AHCRE/ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ (Online) ಅರ್ಜಿ ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು 15 ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 1 ರೊಳಗೆ ಅರ್ಜಿ ಸಲ್ಲಿಸಬೇಕಿದೆ.ಒಟ್ಟು 36 ಹುದ್ದೆಗಳಿಗೆ ನೇಮಕಾತಿಗಾಗಿ ಹೈಕೋರ್ಟ್ ಅರ್ಜಿಗಳನ್ನು (High Court applications) ಆಹ್ವಾನಿಸಿದೆ. ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದಂದು ಅಥವಾ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತಾ ಮಾನದಂಡಗಳು:
ರಿಸರ್ಚ್ ಅಸೋಸಿಯೇಟ್ (Research Associate) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ (University) ಕಾನೂನು ಪದವಿಯನ್ನು ಹೊಂದಿರಬೇಕು. ಅದೇ ಸಮಯದಲ್ಲಿ, ಎಲ್‌ಎಲ್‌ಬಿ ಕೊನೆಯ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರ ವಯಸ್ಸು 21 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 26 ವರ್ಷಗಳಿಗಿಂತ ಹೆಚ್ಚಿರಬಾರದು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕದ ವಿವರಗಳು ಹೀಗಿವೆ :
ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಅನ್ವಯವಾಗುವ ಯಾವುದೇ ಬ್ಯಾಂಕ್ ವರ್ಗಾವಣೆ ಶುಲ್ಕಗಳ (Bank transfer charges) ಜೊತೆಗೆ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು.
ಇದನ್ನೂ ಓದಿ: AAIನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆ ಖಾಲಿ,ಪಿಯುಸಿ ಪಾಸಾದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ!
ಅರ್ಜಿ ಸಲ್ಲಿಸುವ ಬಗೆ
ಅಧಿಕೃತ ವೆಬ್‌ಸೈಟ್ exam.nta.ac.in/AHCRE ಗೆ ಭೇಟಿ ನೀಡಿ. ಮುಖಪುಟದಲ್ಲಿ ನೀಡಿರುವ ನೇಮಕಾತಿ ಟ್ಯಾಬ್ (Recruiting tab) ಮೇಲೆ ಕ್ಲಿಕ್ ಮಾಡಿ. ಇಲ್ಲಿ ನೀಡಿರುವ ಅಧಿಸೂಚನೆ (golden opportunity for candidates) ಲಿಂಕ್ ಮೇಲೆ ಕ್ಲಿಕ್ ಮಾಡಿ. ಈಗ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ.