ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 500 ಹೊಸ ಶಾಲೆಗಳು ಪ್ರಾರಂಭ
ಅತಿಥಿ ಶಿಕ್ಷಕರಿಗೆ 2 ಸಾವಿರ, ಬಿಸಿಯೂಟ ತಯಾರಕರಿಗೆ 1000 ಹೆಚ್ಚಳ ಎಂದ ಸಿಎಂ
ವಾರದ 6 ದಿನಗಳೂ ಮಕ್ಕಳಿಗೆ ಸಿಗಲಿದೆ ಮೊಟ್ಟೆ/ ಬಾಳೇಹಣ್ಣು.(Good News for guest teachers)
Bengaluru: ಬಹು ನಿರೀಕ್ಷಿತ ಬಜೆಟ್ ಮಂಡನೆ ಇಂದು ನಡೆಯುತ್ತಿದೆ.ರಾಜ್ಯದಲ್ಲಿ ಈಗಿರುವ ಪಬ್ಲಿಕ್ ಶಾಲೆಗಳನ್ನು (Public schools) ವಿಸ್ತರಣೆ ಮಾಡಲಾಗುವುದು. ಇದಕ್ಕೆ ಅನುಕೂಲ ಆಗುವಂತೆ ಎಡಿಬಿ ಬ್ಯಾಂಕ್ನಿಂದ 2,500 ಕೋಟಿ ರೂ. ಪಡೆದು 500 ಹೊಸ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ಜೊತೆಗೆ, ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ (government schools and colleges) ಕಾರ್ಯ ನಿರ್ವಹಿಸುವ ಅತಿಥಿ ಶಿಕ್ಷಕರಿಂದ ಉಪನ್ಯಾಸಕರವರೆಗೆ ತಲಾ 2,000 ರೂ. ಹಾಗೂ ಬಿಸಿಯೂಟ ತಯಾರಕರಿಗೆ ತಲಾ 1,000 ರೂ. ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಬಜೆಟ್ ಮಂಡನೆ ವೇಳೆ ಶಿಕ್ಷಣ ಇಲಾಖೆಗೆ ಅನುದಾನ ಹಂಚಿಕೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಣಕ್ಕೆ ಆದ್ಯತೆ (Education is a priority) ನೀಡಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ಪ್ರಸಾರಕ್ಕೆ ಅನುಕೂಲ ಆಗುವಂತೆ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ (Asian Development Bank) ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಇನ್ನು ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ (Azim Premji Foundation) ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು ಅಂದಿದ್ದಾರೆ.
ಇನ್ನು LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು.
ಇದನ್ನು ಓದಿ: ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಘೋಷಣೆ ಮಾಡಿದ್ದಾರೆ.ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ (Good News for guest teachers) ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು (Honorarium) ತಲಾ 1,000 ರೂ. ಹೆಚ್ಚಿಸಲಾಗುವುದು. ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಬಜೆಟ್ ನಲ್ಲಿ ಮಂಡಿಸಿದ್ದಾರೆ.