ವಾಷಿಂಗ್ಟನ್: ವಿಶ್ವದಲ್ಲಿ ಕೊರೊನಾ ಹಾವಳಿ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಸಿಬ್ಬಂದಿ ಕಚೇರಿಗೆ ಹಾಜರಾಗಬೇಕು ಎಂದು ಸೂಚನೆ ನೀಡಿದ್ದ ಗೂಗಲ್ ಇದೀಗ ತೀರ್ಮಾನ ಬದಲಾಯಿಸಿದೆ. ಕಚೇರಿಯಿಂದಲೇ ಕರ್ತವ್ಯ ನಿರ್ವಹಣೆಯನ್ನು ಮುಂದೂಡಿದೆ.
ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ತೀರ್ಮಾನ ಬದಲಾಯಿಸಲಾಗಿದೆ 2022 ಜನವರಿ 10ರಿಂದ ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ನಿರ್ವಹಿಸುವಂತೆ ಗೂಗಲ್ ಸಿಬ್ಬಂದಿಗೆ ಸೂಚನೆ ನೀಡಿತ್ತು. ಇದೀಗ ತೀರ್ಮಾನ ಬದಲಾಯಿಸಲಾಗಿದೆ. ಮುಂದಿನ ಆದೇಶದ ತನಕ ವರ್ಕ್ ಫ್ರಮ್ ಹೋಮ್ ಮುಂದುವರಿಸಲು ತೀರ್ಮಾನಿಸಲಾಗಿದೆ. ಕೊರೋನಾ ಮಹಾಮಾರಿ ವೇಳೆ ವಿಶ್ವದಲ್ಲಿ ವರ್ಕ್ ಫ್ರಮ್ ಹೋಮ್ ಜಾರಿಗೆ ತಂದ ಸಂಸ್ಥೆಗಳಲ್ಲಿ ಗೂಗಲ್ ಮೊದಲ ಸ್ಥಾನದಲ್ಲಿದೆ.