Visit Channel

ಕೈಗಾರಿಕಾ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

police

ಬೆಂಗಳೂರು : ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡಲು ಎದುರು ನೋಡುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ಕೈಗಾರಿಕೆ ಭದ್ರತಾ ಪಡೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಒಟ್ಟು63 ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 3 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

police


63 ಹುದ್ದೆಗಳ ಪೈಕಿ ಪುರುಷ ಅಭ್ಯರ್ಥಿಗಳಿಗೆ 40, ಮಹಿಳೆಯರಿಗೆ 12, ಸೇವೆಯಲ್ಲಿರುವವರಿಗೆ 9 ಹಾಗೂ ತೃತೀಯ ಲಿಂಗದ ಅಭ್ಯರ್ಥಿಗಳಿಗೆ 2 ಹುದ್ದೆಯನ್ನು ಮೀಸಲಿಡಲಾಗಿದೆ. ವಯೋಮಿತಿ : ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ ವಯೋಮಿತಿ 26 ವರ್ಷ ಎಂದು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷಗಳಾಗಿವೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ http://rec21ksp-online.in/ ಗೆ ಭೇಟಿ ನೀಡಬಹುದು.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.