ಕನ್ನಡ ಅಭಿವೃದ್ಧಿಗೆ ಕಾನೂನಾತ್ಮಕ ಸ್ಥಾನಮಾನ ನೀಡಲು ಸರ್ಕಾರ ಬದ್ಧ: ಬೊಮ್ಮಾಯಿ

Haveri : ಕನ್ನಡ ಭಾಷೆಯ ಸಮಗ್ರ ಬೆಳವಣಿಗೆಗೆ ಕಾನೂನು ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Government committed legal status)  ಹೇಳಿದ್ದಾರೆ.

ಹಾವೇರಿಯಲ್ಲಿ(Haveri) ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Akhila bharatha kannada sahitya sammelana) ಉದ್ಘಾಟಿಸಿ ಮಾತನಾಡಿದ ಅವರು,

  ಕನ್ನಡ ಪ್ರಾಚೀನ ಭಾಷೆ, ಕನ್ನಡದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಶೀಘ್ರದಲ್ಲೇ ಕಾನೂನು ಸ್ಥಾನಮಾನವನ್ನು ನೀಡಲಿದೆ. ಕನ್ನಡವು ಅತ್ಯುತ್ತಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಹೊಂದಿದೆ.

ಅದು ನಮ್ಮ ಭಾಷೆಯ ಮೂಲ ಶಕ್ತಿಯಾಗಿದೆ. ಕನ್ನಡ ಸಾಹಿತ್ಯ ಲೋಕವು ಭಾವನೆ ಮತ್ತು ಅರ್ಥದಿಂದ ತುಂಬಿದ ಜೀವನವನ್ನು ನೀಡಿದೆ ಎಂದು ಬೊಮ್ಮಾಯಿ ಹೇಳಿದರು.

ನಾಡಿನ ಸಂಸ್ಕೃತಿಯಲ್ಲಿ ಕನ್ನಡ ಸಾಹಿತ್ಯ ಪ್ರಮುಖ ಪಾತ್ರ ವಹಿಸಿದ್ದು, ಅದನ್ನು ಗುರುತಿಸಿ ಪ್ರಚಾರ ಮಾಡಬೇಕಾಗಿದೆ. ಕನ್ನಡ ಭಾಷೆ ನಾಡಿನಾದ್ಯಂತ ಪಸರಿಸಿ (Government committed legal status) ಎಲ್ಲೆಡೆ ಬೆಳೆಯುವಂತೆ ನೋಡಿಕೊಳ್ಳಬೇಕು.

ಇದೇ ಕನ್ನಡ ಕೂಟದ ಮುಖ್ಯ ಉದ್ದೇಶವಾಗಿದೆ. ಇನ್ನು  ಉನ್ನತ ಶಿಕ್ಷಣದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮತ್ತು  ಸ್ಥಳೀಯರಿಗೆ ಕೈಗಾರಿಕೆಗಳಿಗೆ ಉದ್ಯೋಗ ನೀಡುವ ಇತರ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಬದ್ದವಾಗಿದೆ. 

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಆದ್ಯತೆ, ಗಡಿ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ,

ಗಡಿಯೊಳಗೆ ಮತ್ತು ಗಡಿಯಾಚೆ ವಾಸಿಸುವ ಕನ್ನಡಿಗರ ಹಿತ ಕಾಪಾಡಲು ತಮ್ಮ ಸರ್ಕಾರ ಬಯಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು. ಸಾಹಿತ್ಯ ಸಮ್ಮೇಳನ ಎಂದರೇ ಕೇವಲ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭವಲ್ಲ.

ಸಾಹಿತ್ಯ ಸಮ್ಮೇಳನದ ನಿಜವಾದ ಸ್ವಾದ ಅಡಗಿರುವುದು ಗೋಷ್ಠಿಗಳಲ್ಲಿ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಗೋಷ್ಠಿಗಳಲ್ಲಿ ಭಾಗವಹಿಸುವ ಮೂಲಕ ಈ ಸಮ್ಮೇಳನವನ್ನು ಯಶಸ್ವಿಗೊಳಿಸೋಣ.

ಹಾಗೂ ಈ ಸಮ್ಮೇಳನದ ನಿರ್ಣಯವನ್ನು ನಮ್ಮ ಸರ್ಕಾರ ಚಾಚೂ ತಪ್ಪದೆ ಜಾರಿಗೆ ತರಲಿದೆ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ.

ಕನ್ನಡ ನಾಡಿನ ಸಮಗ್ರ ಅಭಿವೃದ್ಧಿ ಜೊತೆಗೆ ಗಡಿನಾಡಿನ ಅಭಿವೃದ್ಧಿ ಹಾಗೂ ಸಂರಕ್ಷಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ.

ಕನ್ನಡ ನಾಡಿನ ಸಮಗ್ರ ಅಭಿವೃದ್ದಿ ಬಿಜೆಪಿ ಸರ್ಕಾರ ಸದಾ ಬದ್ದವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Exit mobile version