• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸರ್ಕಾರಿ ವೈದ್ಯರ ಮುಷ್ಕರ ಘೋಷಣೆ: ಮಾರ್ಚ್ 11ರಿಂದ ಓಪಿಡಿ ಸೇವೆಗೆ ತಡೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕರ್ನಾಟಕದಲ್ಲಿ ಸರ್ಕಾರಿ ವೈದ್ಯರ ಮುಷ್ಕರ ಘೋಷಣೆ: ಮಾರ್ಚ್ 11ರಿಂದ ಓಪಿಡಿ ಸೇವೆಗೆ ತಡೆ
0
SHARES
9
VIEWS
Share on FacebookShare on Twitter
  • ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಮುಷ್ಕರ: ರಾಜ್ಯದ ಆಸ್ಪತ್ರೆಗಳಲ್ಲಿ (Government doctors strike in Karnataka) ಓಪಿಡಿ ಸೇವೆ ಸ್ಥಗಿತದ ಭೀತಿ
  • ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಕಷ್ಟದ ಭೀತಿ: ವೈದ್ಯರ ಮುಷ್ಕರದಿಂದ ಚಿಕಿತ್ಸೆ ಮೇಲೆ ಪರಿಣಾಮ
  • ಜೇಷ್ಠತಾ ಪಟ್ಟಿ, ನೇಮಕಾತಿ ಹಾಗೂ ಔಷಧ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ವೈದ್ಯರ ಆಗ್ರಹ

Bengaluru: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸಾವಿರಾರು (Government doctors strike in Karnataka) ರೋಗಿಗಳಿಗೆ ಮಾರ್ಚ್ 11ರಿಂದ ದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಸರ್ಕಾರಿ ವೈದ್ಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (Out Patient Department) ಸೇವೆಗಳು ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

Government doctors strike in Karnataka

ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸಾಮಾನ್ಯ ಆರೋಗ್ಯ ತಪಾಸಣೆ, ಸ್ಕ್ಯಾನಿಂಗ್ ಮತ್ತು ರಕ್ತಪರೀಕ್ಷೆಗಳಂತಹ ಚಿಕಿತ್ಸೆಗಳಿಗಾಗಿ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸುವ ರೋಗಿಗಳಿಗೆ ಇದರಿಂದ ತೀವ್ರ ತೊಂದರೆ ಉಂಟಾಗಬಹುದು. ವಿಶೇಷವಾಗಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಈ ಪರಿಸ್ಥಿತಿ ದೊಡ್ಡ ಸಮಸ್ಯೆಯಾಗುವ ಸಾಧ್ಯತೆ ಇದೆ.

ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಮುಂದಾಗಿದೆ.

ಸುಮಾರು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡಿರುವ ವೈದ್ಯರು, ಹಲವು ವರ್ಷಗಳಿಂದ ತಮ್ಮ ಸಮಸ್ಯೆಗಳು ಪರಿಹಾರವಾಗದೆ ಉಳಿದಿವೆ ಎಂದು ಆರೋಪಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ವೈದ್ಯರ ನೇಮಕಾತಿ ಪ್ರಕ್ರಿಯೆ ಸರಿಯಾಗಿ ನಡೆಯದಿರುವುದು, 13 ವರ್ಷಗಳಿಂದ (Government doctors strike in Karnataka) ಪರಿಷ್ಕರಣೆಗೊಳ್ಳದ ಜೇಷ್ಠತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಹಾಗೂ ಮೂಲಭೂತ ಸೌಲಭ್ಯಗಳ ಅಭಾವ ಸೇರಿದಂತೆ ಹಲವು ಸಮಸ್ಯೆಗಳು ವೈದ್ಯರಲ್ಲಿ ಅಸಮಾಧಾನವನ್ನುಂಟು ಮಾಡಿವೆ.

ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ವೈದ್ಯರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ವೈದ್ಯರ ಬೇಡಿಕೆಗಳ ಕುರಿತು ಚರ್ಚಿಸಲು ಆರೋಗ್ಯ ಇಲಾಖೆ ಈಗಾಗಲೇ ಏಳು ಸುತ್ತಿನ ಸಭೆಗಳನ್ನು ನಡೆಸಿದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿಲ್ಲ.

ಇತ್ತೀಚೆಗೆ ಮಾರ್ಚ್ 2ರಂದು ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯೂ ಫಲಕಾರಿಯಾಗದೆ ಅಂತ್ಯಗೊಂಡಿದೆ ಎಂದು ವೈದ್ಯಾಧಿಕಾರಿಗಳ ಸಂಘದ ನಾಯಕರು ತಿಳಿಸಿದ್ದಾರೆ.

ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ದೊರಕದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದೇ ಮುಷ್ಕರಕ್ಕೆ ಕಾರಣ ಎಂದು ಸಂಘದ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ.

ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ.

ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಚಿಕಿತ್ಸಾ ಸೇವೆಗಳು ನಿಲ್ಲುವ ಸಾಧ್ಯತೆ ಇದೆ.

ಇದೇ ವೇಳೆ ತುರ್ತು ಸೇವೆಗಳು ಮುಂದುವರಿಯಲಿವೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಆರೋಗ್ಯ ಕ್ಷೇತ್ರದಲ್ಲಿ ಈ ರೀತಿಯ ಪರಿಸ್ಥಿತಿ ಉಂಟಾದರೆ ರಾಜ್ಯದ ಆರೋಗ್ಯ ಸೇವೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ವೈದ್ಯರು ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಯೋಜನೆಯನ್ನು ಅವರು ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಪರಿಷ್ಕರಿಸುವ ಅಗತ್ಯತೆ ಎದುರಾಗಿದೆ. ಸರ್ಕಾರಿ ಆಸ್ಪತ್ರೆಗಳ ಮೇಲೆ

ಅವಲಂಬಿತರಾಗಿರುವ ಸಾವಿರಾರು ಬಡ ರೋಗಿಗಳ ಹಿತದೃಷ್ಟಿಯಿಂದ ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರಕಬೇಕೆಂಬ ನಿರೀಕ್ಷೆ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.

ಇದನ್ನು ಓದಿ : https://vijayatimes.com/lpg-cylinder-shortage/

Tags: bengaluruDoctorGovernmentKarnataka

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.