ದಿವ್ಯಾಂಗ ಮತ್ತು ಗರ್ಭಿಣಿಯರಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ

ನವದೆಹಲಿ ಡಿ 10 : ಒಮಿಕ್ರಾನ್‌ ಮತ್ತು ಕೋವಿಡ್‌ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗರ್ಭಿಣಿ ಮತ್ತು ದಿವ್ಯಾಂಗ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸರ್ಕಾರ ಆದೇಶ ಮಾಡಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಗರ್ಭಿಣಿ ಮಹಿಳಾ ಉದ್ಯೋಗಿಗಳು ಮತ್ತು ದಿವ್ಯಾಂಗ ಉದ್ಯೋಗಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ನೈಜ ಸಾಮರ್ಥ್ಯದ ಶೇಕಡಾ 50 ಕ್ಕೆ ನಿರ್ಬಂಧಿಸಲಾಗಿದೆ ಮತ್ತು ಉಳಿದ ಶೇಕಡಾ 50 ರಷ್ಟು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಚಿವರು ಹೇಳಿದರು. ಆದರೆ, ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನ ವಿಧಾನಗಳಲ್ಲಿ ಲಭ್ಯವಿರುತ್ತಾರೆ ಎಂದು ಅವರು ಹೇಳಿದರು

ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಕುರಿತು ವಿವರಿಸಿದ ಡಾ ಸಿಂಗ್, ಗರ್ಭಿಣಿಯರು ಮತ್ತು ದಿವ್ಯಾಂಗ ಉದ್ಯೋಗಿಗಳು ಮನೆಯಿಂದಲೇ ಲಭ್ಯವಿರಬೇಕು ಮತ್ತು ಕೆಲಸ ಮಾಡಬೇಕಾಗುತ್ತದೆ. ಕಂಟೈನ್‌ಮೆಂಟ್ ಝೋನ್‌ನಲ್ಲಿ ವಾಸಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಂಟೈನ್‌ಮೆಂಟ್ ಝೋನ್ ಡಿನೋಟಿಫೈ ಮಾಡುವವರೆಗೆ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗುತ್ತದೆ ಎಂದು ಅವರು ಹೇಳಿದರು.

Exit mobile version