ಪೋಕ್ಸೋ ಪ್ರಕರಣ ತಡೆಗೆ ರಾಜ್ಯ (Government guidelines to prevent POCSO cases ) ಸರ್ಕಾರದ ಕಠಿಣ ಕ್ರಮ
ಅಪ್ರಾಪ್ತ ಗರ್ಭಿಣಿ ಪ್ರಕರಣಗಳನ್ನು ಕಡ್ಡಾಯವಾಗಿ ವರದಿ ಮಾಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
ನಿಯಮ ಉಲ್ಲಂಘಿಸಿದರೆ ವೈದ್ಯರು ಮತ್ತು ಆಸ್ಪತ್ರೆಗಳಿಗೆ ಜೈಲು ಹಾಗೂ ದಂಡ
Bengaluru: ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಗರ್ಭಧಾರಣೆ ಪ್ರಕರಣಗಳನ್ನು ಗಂಭೀರವಾಗಿ (Government guidelines to prevent POCSO cases) ಪರಿಗಣಿಸಿರುವ ರಾಜ್ಯ ಸರ್ಕಾರ, ಪೋಕ್ಸೋ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಮಹತ್ವದ ಕ್ರಮ ಕೈಗೊಂಡಿದೆ.
ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲ ಗರ್ಭಿಣಿಯರ ಪ್ರಕರಣಗಳನ್ನು ಕಡ್ಡಾಯವಾಗಿ ವರದಿ ಮಾಡಬೇಕು
ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ.

ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆಯ ಕಾಯಿದೆ, 2012 (POCSO Act) ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಗರ್ಭಧಾರಣೆ ಸಂಭವಿಸುವುದು
ಗಂಭೀರ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ಇದನ್ನು ಕಾನೂನುಬದ್ಧವಾಗಿ ವರದಿ ಮಾಡುವುದು ಕಡ್ಡಾಯವಾಗಿದೆ.
ಇಂತಹ ಪ್ರಕರಣಗಳನ್ನು ಮರೆಮಾಚುವುದು ಅಥವಾ ವರದಿ ಮಾಡದೇ ಬಿಡುವುದು ಕಾನೂನು ಉಲ್ಲಂಘನೆಯಾಗಿ ಪರಿಗಣಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರು ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಇಲಾಖೆ ತಿಳಿಸಿದೆ.
POCSO ಕಾಯಿದೆಯ ಸೆಕ್ಷನ್ 19(1) ಪ್ರಕಾರ, ಯಾವುದೇ ವ್ಯಕ್ತಿಗೆ ಅಥವಾ ಸಂಸ್ಥೆಗೆ ಇಂತಹ ಅಪರಾಧದ ಬಗ್ಗೆ ಮಾಹಿತಿ ಅಥವಾ ಅನುಮಾನ ಇದ್ದರೂ ಕೂಡ
ತಕ್ಷಣವೇ ವಿಶೇಷ ಬಾಲ ನ್ಯಾಯ ಪೊಲೀಸ್ ಘಟಕ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
ಜೊತೆಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಕ್ರಮಗಳಿಗೆ ಸಹಕರಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂತಹ ಪ್ರಕರಣಗಳನ್ನು ವರದಿ ಮಾಡುವಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ವೈದ್ಯರು, ಆಸ್ಪತ್ರೆ ಆಡಳಿತ ಅಥವಾ ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ಪೋಕ್ಸೋ ಕಾಯಿದೆಯ ಸೆಕ್ಷನ್ 21(2) ಪ್ರಕಾರ, ಪ್ರಕರಣವನ್ನು ವರದಿ ಮಾಡಲು ವಿಫಲರಾದರೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ
ಕಾನೂನಿನಲ್ಲಿ ಇದೆ. ಆದ್ದರಿಂದ ಯಾವುದೇ ಆಸ್ಪತ್ರೆ ಅಥವಾ ವೈದ್ಯರು ಈ ನಿಯಮಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ಪೋಕ್ಸೋ ಪ್ರಕರಣಗಳ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು, ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು,
ತನಿಖಾ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು ಹಾಗೂ ವೈದ್ಯರು ಮತ್ತು ಸಿಬ್ಬಂದಿಗೆ ಪೋಕ್ಸೋ ಕಾಯಿದೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಲಾಗಿದೆ.
ಈ ಹೊಸ ಮಾರ್ಗಸೂಚಿ ಏಪ್ರಿಲ್ 1, 2026 ರಿಂದಲೇ ಜಾರಿಗೆ ಬಂದಿದ್ದು, ನಿಯಮಗಳನ್ನು ಪಾಲಿಸದ ಆಸ್ಪತ್ರೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಇದನ್ನು ಓದಿ : https://vijayatimes.com/new-mutual-fund-schemes/