- ಗ್ಯಾರಂಟಿ ಭಾಗ್ಯದಿಂದ ಅಭಿವೃದ್ಧಿ ಶೂನ್ಯ (government is responsible for price hike)
- ವಿದ್ಯುತ್ ದರ, ಬಸ್ ಮೆಟ್ರೋ ದರ, ನೀರಿನ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರ
- ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ ಗ್ಯಾರಂಟಿ ಯಶಸ್ವಿ ಎಂದು ಟಾಂಗ್
Bengaluru: ಈಗಾಗಲೇ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವಾರು ಬಾರಿ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ (BJP State President) ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ಶುಕ್ರವಾರ ರಾಜ್ಯದ ಆಡಳಿತಾರೂಢ ಪಕ್ಷ ಕಾಂಗ್ರೆಸ್ ಸರ್ಕಾರವು (Congress Govt) ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಬಣ್ಣದ ಹಬ್ಬ ಹೋಳಿಯ ಶುಭಾಶಯ ಕೋರಿ ನಾಡಿನ ಬೆನ್ನೆಲುಬಾದ ರೈತರ ಬದುಕು ಹಸನಾಗಲಿ, ಎಲ್ಲ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು.
ಬಳಿಕ ರಾಜ್ಯ ಸರ್ಕಾರದ (State Govt) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಸರ್ಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ (Stamp duty) ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ.ಬಜೆಟ್ (Budget) ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ. ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ.

ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ, ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದು ಹೇಳಿದರು.
ಒಂದೆಡೆ ರಾಜ್ಯ ಅಭಿವೃದ್ಧಿ (State development) ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ (price rise) ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ತಮಿಳುನಾಡಿನ ರಾಜಕಾರಣವು (Politics of Tamil Nadu) ಕೇಂದ್ರ ವಿರೋಧಿ ನೀತಿ (Anti-central policy) ಅನುಸರಿಸುತ್ತಾ ಬಂದಿದೆ.
ಇದನ್ನೂ ಓದಿ: ಸಮಾಜದ ಹೆಸರಿನಲ್ಲಿ ಸಭೆ ನಡೆಸುವ ಬದಲು ಪಕ್ಷ ಸಂಘಟನೆಗೆ ಒತ್ತು ನೀಡಿ :ಯತ್ನಾಳ್ ಬಣಕ್ಕೆ ಟಾಂಗ್ ನೀಡಿದ ಬಿವೈ ವಿಜಯೇಂದ್ರ
ಅವರು ಕೇಂದ್ರ ವಿರೋಧಿ ನೀತಿಗಳಿಂದ ಬೇಳೆ ಬೇಯಿಸಿಕೊಳ್ಳುತ್ತಾರೆ. ಹಲವಾರು ದಶಕಗಳಿಂದ ಇದನ್ನು (government is responsible for price hike) ನೋಡುತ್ತಾ ಬರುತ್ತಿದ್ದೇವೆ. ರೂಪಾಯಿಯನ್ನು ತಮಿಳು ಭಾಷೆಯಲ್ಲಿ ಬರೆಯುವ ಮೂಲಕ ಇದೊಂದು ಹೊಸ ಅಧ್ಯಾಯ (A new chapter) ಪ್ರಾರಂಭಿಸಿದ್ದಾರೆ. ಇನ್ನು ದೇಶದ ಒಳಿತಿಗಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು (Prime Minister Narendra Modi) ಒನ್ ನೇಷನ್ ಒನ್ ಎಲೆಕ್ಷನ್ (One Nation One Election) ಬಗ್ಗೆ ಆಲೋಚಿಸಿದ್ದಾರೆ.
ಡಿಲಿಮಿಟೇಶನ್ (Delimitation) ವಿಚಾರ ಮುಂದಿಟ್ಟು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ (Chief Minister Stalin) ಅವರು ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿಗಳೂ (Chief Ministers of the state) ಅದಕ್ಕೆ ಧ್ವನಿಗೂಡಿಸುವುದು ವಿಪರ್ಯಾಸ ಎಂದು ತಿಳಿಸಿದ್ದಾರೆ