ಅಗತ್ಯ ಲಸಿಕೆ ಪೂರೈಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ: ಸಚಿವ ಕೆ. ಸುಧಾಕರ್‌

ಬೆಂಗಳೂರು, ಮೇ. 10: ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದು, ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ, ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮನವಿ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.
ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದಿದ್ದಾರೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.