• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಟ್ರಾನ್ಸ್ ಫ್ಯಾಟ್ ನಿರ್ಮೂಲನೆಗೆ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆಹಾರ ಉದ್ಯಮಗಳಿಗೆ ಹೊಸ ಮಾರ್ಗಸೂಚಿ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದಲ್ಲಿ ಟ್ರಾನ್ಸ್ ಫ್ಯಾಟ್ ನಿರ್ಮೂಲನೆಗೆ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆಹಾರ ಉದ್ಯಮಗಳಿಗೆ ಹೊಸ ಮಾರ್ಗಸೂಚಿ
0
SHARES
7
VIEWS
Share on FacebookShare on Twitter

ಟ್ರಾನ್ಸ್ ಫ್ಯಾಟ್ ವಿರುದ್ಧ ಸರ್ಕಾರದ (Government measures to eliminate trans fats ) ಸಮರ: ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿ

ಆಹಾರ ಉದ್ಯಮಗಳಿಗೆ ಹೊಸ ಸೂಚನೆ, ನಿಯಮ ಉಲ್ಲಂಘಿಸಿದವರಿಗೆ ಭಾರೀ ದಂಡ ಮತ್ತು ಕಠಿಣ ಕ್ರಮ

ಶೇ.2ಕ್ಕಿಂತ ಹೆಚ್ಚು ಟ್ರಾನ್ಸ್ ಫ್ಯಾಟ್‌ಗೆ ಅವಕಾಶವಿಲ್ಲ; ಪರಿಶೀಲನೆ, ಪರೀಕ್ಷೆ ಮತ್ತು ಜಾಗೃತಿ ಅಭಿಯಾನ

Bengaluru : ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ (Government measures to eliminate trans fats) ಕರ್ನಾಟಕ ಸರ್ಕಾರ ಟ್ರಾನ್ಸ್ ಫ್ಯಾಟ್ ನಿರ್ಮೂಲನೆಗೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಮಟ್ಟದಲ್ಲಿ ವಿಶೇಷ ಜಾಗೃತಿ ಹಾಗೂ ಸಂವೇದನಾಶೀಲತಾ ಕಾರ್ಯಕ್ರಮವನ್ನು ಆಯೋಜಿಸಿ, ಆಹಾರ ಉತ್ಪಾದಕರು,

ಖಾದ್ಯ ತೈಲ ತಯಾರಕರು, ಆಹಾರ ಸುರಕ್ಷತಾ ಅಧಿಕಾರಿಗಳು, ತಾಂತ್ರಿಕ ತಜ್ಞರು ಹಾಗೂ ವಿವಿಧ ಆಹಾರ ಉದ್ಯಮಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದೆ.

Government measures to eliminate trans fats

ರಾಜ್ಯದಾದ್ಯಂತ ಟ್ರಾನ್ಸ್ ಫ್ಯಾಟ್ ಪ್ರಮಾಣವನ್ನು ನಿಯಮಿತ ಮಿತಿಯೊಳಗೆ ಕಾಯ್ದುಕೊಳ್ಳುವುದು, ಸುರಕ್ಷಿತ ಆಹಾರ ಉತ್ಪಾದನೆಯನ್ನು ಉತ್ತೇಜಿಸುವುದು ಹಾಗೂ ಸಾರ್ವಜನಿಕರಲ್ಲಿ ಆರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಈ ಸಭೆಯಲ್ಲಿ ಟ್ರಾನ್ಸ್ ಫ್ಯಾಟ್ ಸೇವನೆಯಿಂದ (Government measures to eliminate trans fats) ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ತಜ್ಞರು ವಿವರವಾಗಿ ಮಾಹಿತಿ ನೀಡಿದರು.

ಟ್ರಾನ್ಸ್ ಫ್ಯಾಟ್ ಅಂಶ ಹೆಚ್ಚಿರುವ ಆಹಾರವನ್ನು ನಿರಂತರವಾಗಿ ಸೇವಿಸುವುದರಿಂದ ಹೃದಯ ಸಂಬಂಧಿತ ಕಾಯಿಲೆಗಳು, ರಕ್ತನಾಳಗಳ ಸಮಸ್ಯೆಗಳು, ಸ್ಥೂಲಕಾಯ,

ಮಧುಮೇಹ ಸೇರಿದಂತೆ ಹಲವು ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಟ್ರಾನ್ಸ್ ಫ್ಯಾಟ್ ಸೇವನೆಯಿಂದ ಪ್ರತಿವರ್ಷ ವಿಶ್ವದಾದ್ಯಂತ ಲಕ್ಷಾಂತರ ಜನರು ಜೀವ ಕಳೆದುಕೊಳ್ಳುತ್ತಿರುವುದು ಆತಂಕಕಾರಿ

ಸಂಗತಿಯಾಗಿದೆ. ಇದೇ ಕಾರಣಕ್ಕೆ ಕೈಗಾರಿಕೆಗಳಲ್ಲಿ ಟ್ರಾನ್ಸ್ ಫ್ಯಾಟ್ ಬಳಕೆಯನ್ನು ಸಂಪೂರ್ಣ ನಿಯಂತ್ರಿಸುವುದು ಕಾಲದ ಅಗತ್ಯವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.

ಭಾರತದಲ್ಲಿ ಈಗಾಗಲೇ ಆಹಾರ ಉತ್ಪನ್ನಗಳಲ್ಲಿ ಕೈಗಾರಿಕೋತ್ಪನ್ನ ಟ್ರಾನ್ಸ್ ಫ್ಯಾಟ್ ಪ್ರಮಾಣವನ್ನು ಶೇ.2ಕ್ಕಿಂತ ಕಡಿಮೆ ಮಟ್ಟದಲ್ಲಿ ಕಾಯ್ದುಕೊಳ್ಳುವ ನಿಯಮ ಜಾರಿಯಲ್ಲಿದೆ.

ಈ ನಿಯಮವನ್ನು ಕರ್ನಾಟಕದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಆಹಾರ ಸುರಕ್ಷತೆ ಇಲಾಖೆ ನಿರ್ಧರಿಸಿದೆ.

ಇದಕ್ಕಾಗಿ ಆಹಾರ ಮಾದರಿಗಳ ಪ್ರಯೋಗಾಲಯ ಪರೀಕ್ಷೆಗಳನ್ನು ಹೆಚ್ಚಿಸುವುದು, ಅಪಾಯ ಆಧಾರಿತ ತಪಾಸಣೆಗಳನ್ನು ತೀವ್ರಗೊಳಿಸುವುದು, ಹೋಟೆಲ್‌ಗಳು, ಬೇಕರಿಗಳು ಹಾಗೂ ಆಹಾರ ಉತ್ಪಾದನಾ ಘಟಕಗಳಲ್ಲಿ ನಿರಂತರ ಪರಿಶೀಲನೆ ನಡೆಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಟ್ರಾನ್ಸ್ ಫ್ಯಾಟ್ ನಿಯಂತ್ರಣಕ್ಕಾಗಿ ಇಲಾಖೆ ಈಗಾಗಲೇ ವ್ಯಾಪಕ ಜಾಗೃತಿ ಅಭಿಯಾನಗಳನ್ನು ನಡೆಸಿದೆ.

ಇದುವರೆಗೆ 52 ಸಾವಿರಕ್ಕೂ ಹೆಚ್ಚು ಆಹಾರ ಉದ್ಯಮಗಳಿಗೆ ತರಬೇತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬಳಸಿದ ಅಡುಗೆ ಎಣ್ಣೆಯ

ಮರುಬಳಕೆಯನ್ನು ತಡೆಯುವ ನಿಟ್ಟಿನಲ್ಲಿ ಲಕ್ಷಾಂತರ ಲೀಟರ್ ಬಳಸಿದ ಎಣ್ಣೆಯನ್ನು ಸಂಗ್ರಹಿಸಿ ಸುರಕ್ಷಿತವಾಗಿ ವಿಲೇವಾರಿ ಮಾಡಲಾಗಿದೆ.

ಜೊತೆಗೆ, ನಿಯಮ ಉಲ್ಲಂಘಿಸಿದ ಅನೇಕ ಆಹಾರ ಉದ್ಯಮಗಳಿಗೆ ನೋಟಿಸ್ ಜಾರಿಗೊಳಿಸಿ ದಂಡ ವಿಧಿಸುವ ಮೂಲಕ ಕಟ್ಟುನಿಟ್ಟಿನ ಜಾರಿ ಕ್ರಮಗಳನ್ನು ಮುಂದುವರಿಸಲಾಗಿದೆ.

ಮುದ್ರಣ ಮತ್ತು ಡಿಜಿಟಲ್ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಆರೋಗ್ಯಕರ ಆಹಾರದ ಮಹತ್ವದ ಕುರಿತು ನಿರಂತರ ಮಾಹಿತಿ ನೀಡಲಾಗುತ್ತಿದೆ.

ಸರ್ಕಾರದ ಈ ಅಭಿಯಾನವು ಕೇವಲ ಕಾನೂನು ಜಾರಿಗೆ ಸೀಮಿತವಾಗಿಲ್ಲ; ಆರೋಗ್ಯಕರ ಕರ್ನಾಟಕ ನಿರ್ಮಾಣದ ದೀರ್ಘಕಾಲೀನ ಗುರಿಯ ಭಾಗವಾಗಿದೆ. ಆಹಾರ ಸುರಕ್ಷತೆ ಇಲಾಖೆ

ವಿವಿಧ ಸಾಮಾಜಿಕ ಸಂಸ್ಥೆಗಳು ಹಾಗೂ ತಾಂತ್ರಿಕ ತಜ್ಞರ ಸಹಯೋಗದೊಂದಿಗೆ ತರಬೇತಿ, ಸಾಮರ್ಥ್ಯ ವೃದ್ಧಿ ಮತ್ತು ತಾಂತ್ರಿಕ ಬೆಂಬಲ ಕಾರ್ಯಕ್ರಮಗಳನ್ನು ಮುಂದುವರಿಸುತ್ತಿದೆ.

ಆಹಾರ ಉದ್ಯಮಗಳ ಸಹಕಾರ, ಕಟ್ಟುನಿಟ್ಟಿನ ನಿಯಮ ಜಾರಿ ಹಾಗೂ ಸಾರ್ವಜನಿಕರ ಜಾಗೃತಿಯಿಂದ ಟ್ರಾನ್ಸ್ ಫ್ಯಾಟ್ ಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಲಿದೆ ಎಂಬ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ.

ಆರೋಗ್ಯಕರ ಆಹಾರ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ನಾಗರಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇಲಾಖೆಯು ಮನವಿ ಮಾಡಿದೆ.

ಇದನ್ನು ಓದಿ : https://vijayatimes.com/modi-announces-fast-track-courts/

Tags: departmentfoodstategovernmentstrict measures

Related News

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026
ಬಿಸಿಯೂಟ ಯೋಜನೆ: ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು; ಮೊಟ್ಟೆ ಸಬ್ಸಿಡಿ ಹೆಚ್ಚಳಕ್ಕೆ ಚಿಂತನೆ
ಪ್ರಮುಖ ಸುದ್ದಿ

ಬಿಸಿಯೂಟ ಯೋಜನೆ: ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು; ಮೊಟ್ಟೆ ಸಬ್ಸಿಡಿ ಹೆಚ್ಚಳಕ್ಕೆ ಚಿಂತನೆ

August 18, 2026
ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು: ವಿಧಾನಸಭೆಯಲ್ಲಿ ಕೋಲಾಹಲ
ಪ್ರಮುಖ ಸುದ್ದಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು: ವಿಧಾನಸಭೆಯಲ್ಲಿ ಕೋಲಾಹಲ

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.