ಕೆ-ಸೆಟ್ ಪರೀಕ್ಷೆಗಳನ್ನು ಮುಂದೂಡಿದ ಸರ್ಕಾರ

ಬೆಂಗಳೂರು, ಏ. 10: ರಾಜ್ಯ ಸರ್ಕಾರ ಏ.11ರಂದು ಭಾನುವಾರ ನಡೆಯಬೇಕಿದ್ದ ಕೆ-ಸೆಟ್‌ ಪರೀಕ್ಷೆಗಳನ್ನು ಮುಂದೂಡಿದೆ.

ಯುಜಿಸಿ ಮಾರ್ಗಸೂಚಿಯಂತೆ ಏಪ್ರಿಲ್ 11 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಕಾರಣಾಂತರಗಳಿಂದ ಕೆ- ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿವಿ ಕೆ-ಸೆಟ್ ಸಂಯೋಜಕ ಪ್ರೊ.ಎಚ್. ರಾಜಶೇಖರ್ ತಿಳಿಸಿದ್ದಾರೆ.

ಕಳೆದ ಮಾರ್ಚ್‌ 22ರವರೆಗೂ ಪ್ರವೇಶ ಪತ್ರಗಳನ್ನು ಡೌನ್‌ ಲೋಡ್‌ ಮಾಡಿಕೊಳ್ಳುವಂತೆ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿತ್ತು. ಕೊರೋನ ಮತ್ತು ಬಸ್‌ ಮುಷ್ಕರದ ಕಾರಣ ನೂರಾರು ಅಭ್ಯರ್ಥಿಗಳು ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದರು. ಆದರೆ ಸರ್ಕಾರ ಸ್ಪಂದಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕೆಸೆಟ್‌ ತೀರ್ಮಾನ ತೆಗೆದುಕೊಂಡಿದೆ.

ಮುಂದಿನ ಕೆ-ಸೆಟ್ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಕೆಸೆಟ್ ವೆಬ್ ಸೈಟ್ ನಲ್ಲಿ ಪ್ರಚುರಪಡಿಸಲಾಗುವುದು. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆ-ಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ kset.uni-mysore.ac.in ನಲ್ಲಿ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ವೀಕ್ಷಿಸುವಂತೆ ತಿಳಿಸಿದ್ದಾರೆ.

Exit mobile version