ಬೆಂಗಳೂರು, ಜ. 27: ಪ್ರಧಾನಿ ನರೇಂದ್ರ ಮೋದಿ ಅವರು ರೈತ ವಿರೋಧಿ ಕಾನೂನುಗಳನ್ನು ಕೂಡಲೇ ಹಿಂಪಡೆಯಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತೇನೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್‌ಗೆ ಸಂಬಂಧಿಸಿದಂತೆ ಅಹಿತಕರ ಘಟನೆಗಳು ನಡೆದರೆ ಅದರ ಹೊಣೆಯನ್ನು ನರೇಂದ್ರ ಮೋದಿ ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ.
ಈ ನಡುವೆ, ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ.