Visit Channel

ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಬೇಕು: ಎಚ್.ಡಿ.ಕೆ

198547-hd

ಬೆಂಗಳೂರು, ಏ. 14: ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕೋವಿಡ್‌ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿ ಹಾಗೂ ಈ ಬಗ್ಗೆ ವಿಪಕ್ಷಗಳ ಜತೆಗೆ ಸಭೆ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲ ಸೌಕರ್ಯ ಕಲ್ಪಿಸಿಕೊಳ್ಳದೆ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.

ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.

ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿವೆ.

ಹೀಗಾಗಿ, ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.