Visit Channel

ಲಾಕ್‌ಡೌನ್‌ ವಿಸ್ತರಣೆಗೆ ಸರ್ಕಾರದ ಚಿಂತನೆ ಹಿನ್ನೆಲೆ: ‘ಜನಹಿತದ ಲಾಕ್‌ಡೌನ್‌’ ಮಾಡಲು ಸರ್ಕಾರಕ್ಕೆ ಎಚ್ಡಿಕೆ ಸಲಹೆ

198547-hd

ಬೆಂಗಳೂರು, ಮೇ. 17: ರಾಜ್ಯ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದಾದರೆ ಅದು ಜನಹಿತದಿಂದ ಕೂಡಿರಲಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಹೀಗಾಗಿ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‌ಡೌನ್‌’ ಕಲ್ಪನೆಯೇ ಆಗಿತ್ತು ಎಂದು ತಿಳಿಸಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಹೇಳಿದ್ದಾರೆ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು ಎಂದು ಸಲಹೆ ನೀಡಿದ್ದಾರೆ.

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ಸರಣಿ ಟ್ವೀಟ್‌ ಮೂಲಕ ಸರ್ಕಾರಕ್ಕೆ‌ ಸಲಹೆ ನೀಡಿದ್ದಾರೆ.

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.