Bengaluru: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ (Micro finance) ಮೂಗುದಾರ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ (Governor’s Ordinance) ಅನುಮೋದನೆ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ (Governor Thawar Chand Gehlot) ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ ಹಾಕಿ (Sign the ordinance) ಅನುಮೋದನೆ ನೀಡಿದ್ದಾರೆ.ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ರಾಜ್ಯ ಸರ್ಕಾರ (State Govt) ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜ್ಯಪಾಲರು (Governor) ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು (Ordinance) ವಾಪಸ್ ಕಳುಹಿಸಿದ್ದರು.ʼ

ಇದಾದ ನಂತರದಲ್ಲಿ ರಾಜ್ಯ ಸರ್ಕಾರ (State Govt) ಮತ್ತೊಮ್ಮೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಕಳುಹಿಸಿದ್ದು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot) ಅಂತಿಮವಾಗಿ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ (Micro finance harassment) ಹಲವಾರು ಜನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ (State Govt) ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ಮುಂದಾಗಿದೆ. ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ (Pros and cons) ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ನಿರ್ಧಾರ ಮಾಡಬೇಕಿದೆ.
ಪ್ರಸ್ತುತ ಕಾನೂನು (Current law) ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ (External debt recovery) , ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ (Micro Finance) ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ (Our government) ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಭರವಸೆ ನೀಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೈಕ್ರೋ ಫೈನಾನ್ಸ್ (Micro Finance) ಆಧ್ಯಾದೇಶವನ್ನು ತಕ್ಷಣವೆ ಜಾರಿಗೆ ತಂದಿರುವುದಾಗಿ ಅವರು ಹೇಳಿದ್ದಾರೆ.