ಕೊರೊನಾ ತಡೆಗೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಭೆ: ಕಾಂಗ್ರೆಸ್ ಲೇವಡಿ

ಬೆಂಗಳೂರು, ಏ. 20: ರಾಜ್ಯಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸುತ್ತಿರುವುದನ್ನು ಕಾಂಗ್ರೆಸ್‌ ಟೀಕಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್‌, ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಮರ್ಥ್ಯವೇ ಅಥವಾ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಬಾಗವೇ..? ಎಂದು ಲೇವಡಿ ಮಾಡಿದೆ.

ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ ಎಂದಿರುವ ರಾಜ್ಯ ಕಾಂಗ್ರೆಸ್, ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಯಿತೇ? ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದೆ.

Exit mobile version