Bengaluru: ಯುವಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಹುಕ್ಕಾಬಾರ್ (Hookah Bar) ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಸಂಬಂಧಪ್ಟಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ #DineshGundurao ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಂಬಾಕು ಉತ್ಪನ್ನಗಳ ಸೇವನೆಯಿಂದ ಯುವಜನತೆಯ ಮೇಲಾಗುತ್ತಿರುವ ದುಷ್ಪರಿಣಾಮವನ್ನು ತಪ್ಪಿಸಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಪ್ರತ್ಯೇಕ ಕಾಯ್ದೆ ರೂಪಿಸಿ, ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಯುವಜನರ ಆರೋಗ್ಯಕ್ಕೆ ಹಾನಿಕಾರವಾಗುವ ಮಾದಕ ವಸ್ತುಗಳಾದ
ಹುಕ್ಕಾ, ಶಿಷಾ ಬಾರ್ (Shisha Bar) ಗಳನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಇಂದು ವಿಕಾಸ ಸೌಧದಲ್ಲಿ (Vikasa Soudha) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದೆ. ಯುವ ಜನತೆಯು ಈ ದೇಶದ ಅಮೂಲ್ಯ ಆಸ್ತಿ.

ದೇಶದ ಉಜ್ವಲ ಭವಿಷ್ಯ ಯುವಶಕ್ತಿಯ ಕೈಯಲ್ಲಿದೆ. ಈ ಯುವ ಸಮೂಹವನ್ನು ದಾರಿತಪ್ಪಿಸುತ್ತಿರುವ ಮಾರಕ ಮಾದಕ ವಸ್ತುಗಳಿಂದ ರಕ್ಷಿಸಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಈಗಾಗಲೇ ಶಾಲಾ ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್ @HealthCareCenter, ದೇವಸ್ಥಾನಗಳು, ಮಂದಿರಿಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ತಂಬಾಕು ಉತ್ಪನ್ನ ಖರೀದಿ ಮಾಡಲು 18 ವರ್ಷದ ಮೇಲ್ಪಟ್ಟವರಿಗೆ ಮಾತ್ರ ಅವಕಾಶವಿದ್ದು, ಈ ವಯೋಮಿತಿಯನ್ನು 21 ವರ್ಷಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ತಂಬಾಕು ಉತ್ಪನ್ನಗಳ ವ್ಯಸನ ಬೆಳೆಸಿಕೊಂಡ ನಂತರ ಅನೇಕ ಯುವಕರು ಡ್ರಗ್ಸ್ (Drugs), ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದಾರೆ. ಇದಕ್ಕೆಲ್ಲ ತಂಬಾಕು ಉತ್ಪನ್ನಗಳ ಸೇವನೆಯೇ ಕಾರಣ ಹೀಗಾಗಿ ಇದಕ್ಕೂ ಕಡಿವಾಣ ಹಾಕಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.