ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆಹಿಡಿದ ರಾಜ್ಯ ಸರ್ಕಾರ ; ಭುಗಿಲೆದ್ದ ಆಕ್ರೋಶ

Bengaluru: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಗ್ಯಾರಂಟಿ (govt withheld temple grants) ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡುವ ಸಲುವಾಗಿ, ರಾಜ್ಯದ ಮುಜರಾಯಿ ಇಲಾಖೆಯ

ಅಡಿಯಲ್ಲಿರುವ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನವನ್ನು ತಡೆ ಹಿಡಿದಿದೆ. ರಾಜ್ಯ ಸರ್ಕಾರದ ಈ ಕ್ರಮಕ್ಕೆ ಹಿಂದೂಪರ ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮುಜರಾಯಿ ಇಲಾಖೆ ಅಡಿಯಲ್ಲಿರುವ ದೇವಸ್ಥಾನಗಳಲ್ಲಿ ಕಾಣಿಕೆ ದುಪ್ಪಟ್ಟಾಗಿದೆ. ಹೀಗಾಗಿ ಈ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು, ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ

ರಾಜ್ಯ ಸರ್ಕಾರ ತಡೆ ಹಿಡಿದಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ

ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು (govt withheld temple grants) ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗಿದೆ.

ಮುಜರಾಯಿ ಇಲಾಖೆ ಅಡಿಯಲ್ಲಿರುವ ದೇವಸ್ಥಾನಗಳ ಆದಾಯ :


2022ರ ಜೂನ್ ರಿಂದ ಜುಲೈ 20ರವರೆಗೆ 58 ದೇವಾಲಯಗಳಲ್ಲಿ ಇ-ಹುಂಡಿಗಳ (E-Hundi) ಮೂಲಕ 19 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ಈ ವರ್ಷ ಬರೋಬ್ಬರಿ 24 ಕೋಟಿ 47 ಲಕ್ಷ ರೂಪಾಯಿ

ಶಕ್ತಿ ಎಫೆಕ್ಟ್: ತುಮಕೂರಲ್ಲಿ ಬಸ್ ಗಳ ಕೊರತೆ ವಿದ್ಯಾರ್ಥಿಗಳಿಗೆ ಭಾರಿ ತೊಂದರೆ

ಆದಾಯ ಬಂದಿದೆ. ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಇ-ಹುಂಡಿಯಲ್ಲಿ ಈ ವರ್ಷ ಜೂನ್ ರಿಂದ ಜುಲೈ 15 ವರೆಗೆ 11 ಕೋಟಿ 16 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷ 11 ಕೋಟಿ 13 ಲಕ್ಷ ರೂಪಾಯಿ

ಸಂಗ್ರಹವಾಗಿತ್ತು. ಯಡಿಯೂರು ಸಿದ್ದಲಿಂಗೇಶ್ವರ ದೇಗುಲದ ಇ-ಹುಂಡಿಯಲ್ಲಿ ಈ ವರ್ಷ 1.48 ಕೋಟಿ ಸಂಗ್ರಹವಾಗಿದೆ. ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಿಯ ಇ -ಹುಂಡಿಯಲ್ಲಿ ಈ ವರ್ಷ 1.27 ಕೋಟಿ ರೂ.

ಸಂಗ್ರಹವಾಗಿದ್ದು, ಕಳೆದ ವರ್ಷ 1 ಕೋಟಿ 5 ಲಕ್ಷ ರೂಪಾಯಿ ಬಂದಿತ್ತು. ಶ್ರೀರಂಗಪಟ್ಟಣದ ನಿಮಿಷಾಂಬ, ಬಳ್ಳಾರಿಯ ಕನಕದುರ್ಗಮ್ಮ ದೇವಿ, ಬೆಂಗಳೂರಿನ ಬನಶಂಕರಿ, ಕನಕಪುರದ ಕಬ್ಬಾಳಮ್ಮ,

ಕೊಪ್ಪಳದ ಹುಲಿಗೆಮ್ಮ, ಬಾದಾಮಿ ಬನಶಂಕರಿ ದೇವಿ ಸೇರಿ ವಿವಿಧ ದೇವಾಲಯಗಳಿಂದ ಕೋಟ್ಯಂತರ ರೂಪಾಯಿ (govt withheld temple grants) ಆದಾಯ ಬಂದಿದೆ.

ಇನ್ನು ರಾಜ್ಯಾದ್ಯಂತ ಸರ್ಕಾರದ ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಈ ಆದೇಶವನ್ನು ಹಿಂಪಡೆಯುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

Exit mobile version