ಬೆಂಗಳೂರು ಸೆ 16 : ರಾಜ್ಯದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವ ಧನ ಹೆಚ್ಚಳದ ಬಗ್ಗೆ ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು
ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮೂರು ಸಾವಿರ, ಉಪಾಧ್ಯಕ್ಷರಿಗೆ ಎರಡು ಸಾವಿರ ಮತ್ತು ಸದಸ್ಯರಿಗೆ ಒಂದು ಸಾವಿರ ರೂ. ಗಳಂತೆ ಗೌರವ ಧನ ನೀಡಲಾಗುತ್ತಿದೆ. ಇದನ್ನು ಅಧ್ಯಕ್ಷ ಸ್ಥಾನಕ್ಕೆ 5 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಮತ್ತು ಸದಸ್ಯರಿಗೆ 3 ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಸದನದಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಅವರು ತಿಳಿಸಿದರು.