ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ ಬೆಂಬಲಿತ ಸದಸ್ಯರು

ಬೆಂಗಳೂರು, ಡಿ. 30: ರಾಜ್ಯದ 82,616 ಸ್ಥಾನಗಳಿಗೆ 5,728 ಗ್ರಾಮ ಪಂಚಾಯಿತಿಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ. ಮುಂದಿನ ರಾಜಕೀಯ ದಿಗ್ಸೂಚಿ ಎಂದು ಪರಿಗಣಿಸಲಾದ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತವಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಿದ್ದು, ಬ್ಯಾಲಟ್ ಪೇಪರ್​ನಿಂದ ಮತದಾನ ಆಗಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ತುಸು ಮಂದಗತಿಯಲ್ಲಿ ಸಾಗುತ್ತಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ಈವರೆಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಬಿಜೆಪಿ ಬೆಂಬಲಿತ 3873, ಕಾಂಗ್ರೆಸ್ ಬೆಂಬಲಿತ 1988, ಜೆಡಿಎಸ್ ಬೆಂಬಲಿತ 1039 ಸದಸ್ಯರು ಮುನ್ನಡೆ ಅಥವಾ ಗೆಲುವು ಹೊಂದಿದ್ದಾರೆ. ಇತರರು ಹಾಗೂ ಪಕ್ಷೇತರರು 503 ಕಡೆ ಮುಂದಿದ್ದಾರೆ.

Exit mobile version