Visit Channel

ನನ್ನ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ ಎಲ್ಲರಿಗೂ ಕೃತಜ್ಞತೆ: ಮಾಜಿ ಸಿಎಂ ಕುಮಾರಸ್ವಾಮಿ

mcms

ಬೆಂಗಳೂರು, ಏ. 17: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾವು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ತಮ್ಮ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ತಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾಕ್ಟರ್ ಮಂಜುನಾಥ್ ಹಾಗೂ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಕಾಯ್ದಿರಿಸಿದ್ದರು. ಅಲ್ಲದೇ ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು.

ಆದರೆ, ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನ ನಂತರ ಅಪೋಲೋ ಆಸ್ಪತ್ರೆಗೆ ದಾಖಲಾದೆ. ಸದ್ಯ, ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲೇ ಕೊರೊನಾ ಚಿಕಿತ್ಸೆ ಪಡೆಯಲು ತೀರ್ಮಾನಿಸಿ, ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು ಎಂದು ತಿಳಿಸಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.