ಇಂದೋರ್,ಜೂ.16: ಕೊರೊನಾದಿಂದ ಗುಣಮುಖರಾಗಿದ್ದ 34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಸೋಂಕು ಕಾಣಿಸಿಕೊಂಡಿದೆ.
ರೋಗಿಯನ್ನು ಏರ್ ಆಂಬುಲೆನ್ಸ್ ಮೂಲಕ ಮುಂಬೈಗೆ ಕರೆದೊಯ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಲ್ಲಿನ ಶ್ರೀ ಅರವಿಂದೊ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ಎದೆರೋಗಗಳ ವಿಭಾಗದ ಮುಖ್ಯಸ್ಥ ಡಾ.ರವಿ ದೋಸಿ ತಿಳಿಸಿದ್ದಾರೆ.
‘ಕೋವಿಡ್ನಿಂದ ಗುಣಮುಖರಾದರೂ ಈ ವ್ಯಕ್ತಿಯಲ್ಲಿ ವಿಪರೀತ ಜ್ವರ, ಮೂಗಿನಿಂದ ರಕ್ತಸ್ರಾವ ಕಾಣಿಸಿಕೊಂಡಿತು. ಕಪ್ಪು ಶಿಲೀಂಧ್ರ ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ಪರೀಕ್ಷೆ ಮಾಡಲಾಯಿತು. ಅವರಿಗೆ ಗ್ರೀನ್ ಫಂಗಸ್ ಸೋಂಕು ತಗುಲಿರುವುದು ದೃಢಪಟ್ಟಿತು’ ಎಂದು ಅವರು ಹೇಳಿದ್ದಾರೆ.