ಹೊಸದಿಲ್ಲಿ, ಜ. 31: ಚಿತ್ರಮಂದಿರಗಳಲ್ಲಿ ಪೂರ್ಣ ಸೀಟು ಭರ್ತಿ ಮಾಡಲು ಫೆಬ್ರವರಿ 1ರಿಂದ ಅವಕಾಶ ನೀಡಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಭಾನುವಾರ ಪ್ರಕಟಿಸಿದ್ದಾರೆ.
ಇದು ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿಯಾಗಿದೆ. ಚಿತ್ರ ಪ್ರದರ್ಶನ, ಚಿತ್ರ ಮಂದಿರ ನಿರ್ವಹಣೆಗೆ ಸಂಬಂಧಿಸಿದಂತೆ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ಪರಿಷ್ಕರಿಸಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಿನಿಮಾ ಥೇಟರ್ಗಳಲ್ಲಿ ಶೇ. 100ರಷ್ಟು ಸೀಟುಗಳನ್ನು ಭರ್ತಿ ಮಾಡಬಹುದಾಗಿದೆ. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಕೋವಿಡ್–19 ನಿಯಮಗಳನ್ನು ಕಡ್ಡಾಯ ಅನುಸರಿಸಬೇಕು ಎಂದು ಹೇಳಿದ್ದಾರೆ.