• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗೃಹಲಕ್ಷ್ಮಿಯರಿಗೆ ದೀಪಾವಳಿ ಬಂಪರ್ ಗಿಫ್ಟ್; 3 ತಿಂಗಳ ಹಣ ಒಂದೇ ಬಾರಿಗೆ ಬಿಡುಗಡೆಗೆ ಸರ್ಕಾರ ಸಿದ್ಧತೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಗೃಹಲಕ್ಷ್ಮಿಯರಿಗೆ ದೀಪಾವಳಿ ಬಂಪರ್ ಗಿಫ್ಟ್; 3 ತಿಂಗಳ ಹಣ ಒಂದೇ ಬಾರಿಗೆ ಬಿಡುಗಡೆಗೆ ಸರ್ಕಾರ ಸಿದ್ಧತೆ
0
SHARES
11
VIEWS
Share on FacebookShare on Twitter

ಗೃಹಲಕ್ಷ್ಮಿಯರಿಗೆ ದೀಪಾವಳಿ (Gruhalakshmi amount release) ಧಮಾಕಾ; ಖಾತೆಗೆ ಒಟ್ಟಿಗೆ ಬರಲಿದೆ 6 ಸಾವಿರ ರೂ.

34, 35 ಮತ್ತು 36ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಸಿದ್ಧತೆ

7,405.86 ಕೋಟಿ ರೂ. ಅನುದಾನ ಬಿಡುಗಡೆಗೆ ನಿರ್ಧಾರ

Bengaluru : ರಾಜ್ಯದ ಮಹಿಳೆಯರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ (Gruhalakshmi amount release) ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಹೊರಬಿದ್ದಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.

ಯೋಜನೆಯ 34, 35 ಮತ್ತು 36ನೇ ಕಂತುಗಳ ಹಣವನ್ನು ಒಂದೇ ಬಾರಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಗ್ಯಾರಂಟಿ (Guarantee) ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

Gruhalakshmi amount release

ಈ ಸಂಬಂಧ ಒಟ್ಟು 7,405.86 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲು (Gruhalakshmi amount release) ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ

ಡಿ.ಕೆ. ಶಿವಕುಮಾರ್ (D.K. Shivakumar) ಅವರು ಈ ಬೃಹತ್ ಮೊತ್ತವನ್ನು ಒಮ್ಮೆಲೆ ಬಿಡುಗಡೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಕುಟುಂಬದ ಮಹಿಳಾ

ಮುಖ್ಯಸ್ಥೆಯರ ಬ್ಯಾಂಕ್ (Bank) ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಈ ಯೋಜನೆಯು ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿದೆ.

ಅದರಲ್ಲೂ ಮನೆ ನಿರ್ವಹಣೆ, ಮಕ್ಕಳ ಶಿಕ್ಷಣ, ದಿನನಿತ್ಯದ ಅಗತ್ಯಗಳು ಹಾಗೂ ಸಣ್ಣಪುಟ್ಟ ಖರ್ಚುಗಳಿಗೆ ಈ ಹಣ ನೆರವಾಗುತ್ತಿದೆ. ಇದೀಗ ಮೂರು ತಿಂಗಳ ಕಂತುಗಳು ಒಟ್ಟಿಗೆ ಬಿಡುಗಡೆಯಾಗಲಿವೆ ಎಂಬ ಮಾಹಿತಿ ಫಲಾನುಭವಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ಸರ್ಕಾರದ ಈ ಕ್ರಮದಿಂದ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಒಂದಿಷ್ಟು ಆರ್ಥಿಕ ನೆರವು ದೊರೆಯುವ ಸಾಧ್ಯತೆಯಿದೆ.

ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಗೆ ಸಂಬಂಧಿಸಿದಂತೆ ಈ ಹಿಂದೆ ಎದುರಾಗಿದ್ದ ಆರ್ಥಿಕ ಸಮಸ್ಯೆಗಳೂ ಮತ್ತೆ ಚರ್ಚೆಗೆ ಬಂದಿವೆ.

2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಸುಮಾರು 4,000 ಕೋಟಿ ರೂಪಾಯಿ ಹಣ ಬಾಕಿ ಉಳಿದಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ (High Court) ಸಲ್ಲಿಸಿರುವ ಆಕ್ಷೇಪಣೆಯಲ್ಲಿ ತಿಳಿಸಿತ್ತು.

ತೀವ್ರ ಆರ್ಥಿಕ ಕೊರತೆಯಿಂದಾಗಿ ಈ ಎರಡು ತಿಂಗಳ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು. ಹಣ ಬಿಡುಗಡೆಗೆ ಸಂಬಂಧಿಸಿದಂತೆ

ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ, ಬಜೆಟ್‌ನಲ್ಲಿ (Budget) ಅಗತ್ಯ ಅನುದಾನದ ಕೊರತೆ ಎದುರಾಗಿತ್ತು ಎಂಬ ಮಾಹಿತಿಯನ್ನೂ ನ್ಯಾಯಾಲಯಕ್ಕೆ ನೀಡಲಾಗಿತ್ತು.

ಇನ್ನು ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವ ವಿಚಾರವನ್ನೂ ಸರ್ಕಾರ ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಮೃತಪಟ್ಟ 1.08 ಲಕ್ಷ ಫಲಾನುಭವಿಗಳಿಗೆ ಒಟ್ಟು 115 ಕೋಟಿ ರೂಪಾಯಿ ಜಮೆಯಾಗಿರುವುದನ್ನು ಒಪ್ಪಿಕೊಂಡಿದ್ದ ಸರ್ಕಾರ, ಈ ಪೈಕಿ ಈಗಾಗಲೇ 15.24 ಕೋಟಿ ರೂಪಾಯಿಯನ್ನು

ವಸೂಲಿ ಮಾಡಿರುವುದಾಗಿ ತಿಳಿಸಿತ್ತು. ಯೋಜನೆಯ ಹಣ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಈ ವಿವರಗಳನ್ನು ನೀಡಿತ್ತು.

ಬಜೆಟ್ ಲಭ್ಯತೆಯ ಆಧಾರದ ಮೇಲೆ ನೆರವು ನೀಡಲಾಗುತ್ತಿದ್ದು, ಈ ಮೊತ್ತವನ್ನು ಕಾನೂನುಬದ್ಧ ಹಕ್ಕಾಗಿ ಪರಿಗಣಿಸಲಾಗದು ಎಂಬ ವಾದವನ್ನೂ ಸರ್ಕಾರ ಮಂಡಿಸಿತ್ತು.

ಒಟ್ಟಿನಲ್ಲಿ, ಮೂರು ಕಂತುಗಳ ಹಣ ಬಿಡುಗಡೆಗೆ ಸಂಬಂಧಿಸಿದ ಪ್ರಕಟಣೆ ಗೃಹಲಕ್ಷ್ಮಿ ಫಲಾನುಭವಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಒಟ್ಟು 7,405.86 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ತಿಳಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Shivakumar) ಅವರಿಂದ ಹಣ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ ಎಂದು ದಿನೇಶ್ ಗೂಳಿಗೌಡ (Dinesh Gooligowda) ಮಾಹಿತಿ ನೀಡಿದ್ದಾರೆ.

ಆದರೆ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗುವ ನಿಖರ ದಿನಾಂಕ ಮತ್ತು ಪಾವತಿ ಪ್ರಕ್ರಿಯೆಯ ಕುರಿತು ಅಧಿಕೃತ ವಿವರಗಳನ್ನು ಗಮನಿಸಬೇಕಿದೆ. ಮೂರು ತಿಂಗಳ

ಹಣ ಒಂದೇ ಬಾರಿಗೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿರುವ ರಾಜ್ಯದ ಲಕ್ಷಾಂತರ ಮಹಿಳೆಯರು ಸರ್ಕಾರದ ಮುಂದಿನ ಅಧಿಕೃತ ಪ್ರಕಟಣೆಯತ್ತ ಕಾಯುತ್ತಿದ್ದಾರೆ.

ಇದನ್ನು ಓದಿ : https://vijayatimes.com/increase-in-breakfast-prices-at-hotels/

Tags: bengaluruCongressGruhalakshmiKarnatakamoneypoliticsscheme

Related News

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ

November 16, 2026
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ

November 16, 2026
ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ
ಪ್ರಮುಖ ಸುದ್ದಿ

ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ

November 16, 2026
2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ
ದೇಶ-ವಿದೇಶ

2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ

November 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.