Visit Channel

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸುವುದು ರಾಜ್ಯಗಳ ಪಾಲಿಗೆ ಮರಣಶಾಸನ: ಎಚ್.ಡಿ.ಕೆ

hdk-new

ಬೆಂಗಳೂರು, ಮಾ. 08: ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಹುನ್ನಾರ ನಡೆಸುತ್ತಿದ್ದು, ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಅವರು, ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯ ಲಪಟಾಯಿಸುವ ತಂತ್ರವನ್ನು ಮಾಡಿದೆ.

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೇ, ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಹೀಗಾಗಿ, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.