IPL : ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಈಗ ರೋಚಕ ಘಟ್ಟಕ್ಕೆ ಬಂದು ನಿಂತಿದೆ. 2023 ಐಪಿಎಲ್ನಲ್ಲಿ ಇಂದು(ಮೇ 15) ಗುಜರಾತ್ ಟೈಟಾನ್ಸ್ (Gujarat Titans) ಮತ್ತು ಆ್ಯಡಂ ಮರ್ಕ್ರಮ್ (Adam Markram) ಅವರ ನಾಯಕತ್ವದಲ್ಲಿ ಸನ್ರೈಸರ್ಸ್ ಹೈದರಾಬಾದ್ (GT Vs SRH IPL 2023) ತಂಡ ಮುಖಾಮುಖಿ ಆಗಲಿದೆ.

ಈ ಪಂದ್ಯವು ಇಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿದೆ. ಗುಜರಾತ್ ಟೈಟಾನ್ಸ್ ತಂಡವು ಇಂದು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುನ್ನುಗ್ಗುಲಿದೆ.
ಈಗಾಗಲೇ ಪ್ಲೇ ಆಫ್ ಲೆಕ್ಕಚಾರ ಆರಂಭವಾಗಿದೆ, ಒಂದು ಪಂದ್ಯದಲ್ಲಾಗುವ ಸೋಲು-ಗೆಲುವು ಮೂರನೇ ತಂಡಕ್ಕೆ ವರದಾನವಾಗುತ್ತಿದೆ.
ಇಂದು ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಪ್ಲೇ ಆಫ್ (Play off) ಪ್ರವೇಶಿಸುತ್ತದೆ. ಒಂದು ವೇಳೆ ಎಸ್ಆರ್ಹೆಚ್ ಸೋತರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.
ಆದರೆ ಇವರಿಬ್ಬರ ಸೋಲು-ಗೆಲುವು ಆರ್ಸಿಬಿಗೆ ಅಥವಾ ಯಾವ ತಂಡದ ಮೇಲೂ ಕೂಡ ಪರಿಣಾಮ ಬೀರು ವುದಿಲ್ಲ.
ಗುಜರಾತ್ ಟೈಟಾನ್ಸ್ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ ಒಟ್ಟು 8 ಗೆಲುವು ಹಾಗೂ 4 ಸೋಲು ಕಂಡು 16 ಅಂಕ (GT Vs SRH IPL 2023) ಪಡೆದುಕೊಂಡು ಈಗ ಟಾಪ್ನಲ್ಲಿದೆ.
ಮುಂಬೈ ವಿರುದ್ಧ ಈ ಹಿಂದಿನ ಪಂದ್ಯದಲ್ಲಿ ಸೋತಿದ್ದರೂ ಪ್ಲೇಯರ್ಸ್ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಹಾರ್ದಿಕ್ ಪಾಂಡ್ಯಯು (Hardik Pandya) ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ.
ಇನ್ನು ಪಾಯಿಂಟ್ ಟೇಬಲ್ನಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ.
ಏಕೆಂದರೆ ಬೌಲಿಂಗ್ನಲ್ಲಿ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಪ್ರದರ್ಶನ ತೋರುತ್ತಿಲ್ಲ.ತಂಡದಿಂದ ಸಂಘಟಿತ ಪ್ರದರ್ಶನ ಬರುತ್ತಿಲ್ಲ.

ಅಭಿಷೇಕ್ ಶರ್ಮಾ, ಅನ್ಮೋಲ್ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ನಾಯಕ ಮರ್ಕ್ರಮ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಪಿಲಿಪ್ಸ್ ಕೆಲ ಪಂದ್ಯಗಳನ್ನು ಉತ್ತಮವಾಗಿ ಆಡಿದರು
ಆದರೆ ಉಳಿದ ಪಂದ್ಯದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು.
ಗುಜರಾತ್ ಟೈಟಾನ್ಸ್:
ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.
ಸನ್ರೈಸರ್ಸ್ ಹೈದರಾಬಾದ್:
ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ.
- ರಶ್ಮಿತಾ ಅನೀಶ್