Visit Channel

ಹೊಸ ವರ್ಷಾಚರಣೆಗೆ ಸರ್ಕಾರದ ಮಾರ್ಗಸೂಚಿಗಳೇನು ?

ಬೆಂಗಳೂರು ಡಿ 31 : ರಾಜ್ಯಾದ್ಯಂತ ಓಮಿಕ್ರಾನ್‌ ಭೀತಿ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಮಾಡಿದ್ದು ಮಾರ್ಗಸೂಚಿಗಳು ಈ ಕೆಳಗಿನಂತಿವೆ.

  • ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳು ಸಾಮಾಜಿಕ ಅಂತರ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಿ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕು. ಆದರೆ, ಗುಂಪು ನೃತ್ಯಕ್ಕಾಗಿ ಡಿಜೆ/ ಡ್ಯಾನ್ಸ್‌ಫ್ಲೋರ್‌ನಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಈ ಕ್ರಮಗಳನ್ನು ಅನುಸರಿಸದಿದ್ದರೆ ಸಂಘಟಕರೇ ಜವಾಬ್ದಾರರಾಗುತ್ತಾರೆ.
  • ಈ ಹಿಂದಿನ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಹೋಟೆಲ್, ಪಬ್, ರೆಸ್ಟೋರಂಟ್, ಮಾಲ್‌ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿರಬೇಕು.
  • ಕೋವಿಡ್ 19 ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ ಹಾಗೂ ಇತರೆ ಇಲಾಖೆ, ಕಾರ್ಪೊರೇಷನ್, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನೂ ಪಾಲಿಸಬೇಕಾಗಿದೆ
  •  ಕ್ಲಬ್, ಪಬ್, ರೆಸ್ಟೋರಂಟ್‌ಗಳು, ಹೋಟೆಲ್, ಉದ್ಯಾನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ.
  • ಡಿ.31ರಿಂದ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಜಿಲ್ಲಾಧಿಕಾರಿಡಿ.31ರಿಂದ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಜಿಲ್ಲಾಧಿಕಾರಿ
  • ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನಗಳು, ಆಟದ ಮೈದಾನಗಳನ್ನು ಬಳಸಬಾರದು
  • ರೆಸ್ಟೋರಂಟ್, ಹೋಟೆಲ್‌, ಕ್ಲಬ್, ಪಬ್‌ಗಳು ಎಂದಿನಂತೆ ಕಾರ್ಯನಿರ್ವಹಿಸಬಹುದು. ಆದರೆ, ಅಲ್ಲಿನ ಸಿಬ್ಬಂದಿ RTPCR ನೆಗೆಟಿವ್ ಹೊಂದಿರಬೇಕು ಹಾಗೂ ಎರಡು ಡೋಸ್ ಲಸಿಕೆ ಪಡೆದಿರಬೇಕು
  • ರೆಸ್ಟೋರಂಟ್, ಹೋಟೆಲ್‌, ಕ್ಲಬ್, ಪಬ್‌ಗಳಿಗೆ ಹೋಗುವವರು ಕಡ್ಡಾಯವಾಗ ಎರಡು ಡೋಸ್ ಲಸಿಕೆ ಪಡೆದಿರಬೇಕು. ಇದನ್ನು ಪರಿಶೀಲಿಸಿಯೇ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಆದೇಶ ಹೊರಡಿಸಿಲಾಗಿದೆ.

Latest News

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.