• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ ಹಾಕುವ ಪೊಲೀಸ್‌ FIR ಗೆ ಹೊಸ ಮಾರ್ಗಸೂಚಿ: ರಾಜ್ಯ ಪೊಲೀಸ್ ಮಹತ್ವದ ಆದೇಶ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ ಹಾಕುವ ಪೊಲೀಸ್‌ FIR ಗೆ ಹೊಸ ಮಾರ್ಗಸೂಚಿ: ರಾಜ್ಯ ಪೊಲೀಸ್ ಮಹತ್ವದ ಆದೇಶ
0
SHARES
16
VIEWS
Share on FacebookShare on Twitter
  • ಸಾಮಾಜಿಕ ಜಾಲತಾಣ ಪ್ರಕರಣಗಳಲ್ಲಿ ಏಕಾಏಕಿ (guidelines for FIR against social media posts) ಎಫ್‌ಐಆರ್ ಹಾಕೋ ಹಾಗಿಲ್ಲ: ಪೊಲೀಸ್ ಇಲಾಖೆಗೆ ಹೊಸ ಗೈಡ್‌ಲೈನ್ಸ್
  • ಮಾನಹಾನಿ ಪ್ರಕರಣಗಳಲ್ಲಿ ನೇರ ಎಫ್‌ಐಆರ್‌ಗೆ ಅವಕಾಶವಿಲ್ಲ, ನ್ಯಾಯಾಲಯದ ಮೊರೆ ಅಗತ್ಯ
  • ಸಾರ್ವಜನಿಕ ಶಾಂತಿಗೆ ತಕ್ಷಣದ ಅಪಾಯವಿದ್ದರೆ ಮಾತ್ರ ಕಾನೂನು ಕ್ರಮ

Bengaluru: ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ (guidelines for FIR against social media posts) ಏಕಾಏಕಿ ಪೊಲೀಸ್‌ ಎಫ್‌ಐಆರ್‌ (FIR) ದಾಖಲು ಮಾಡುವುದು ಮತ್ತು ಆರೋಪಿಗಳನ್ನು ತಕ್ಷಣ ಬಂಧಿಸುವ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಐಜಿಪಿ ಎಂ.ಎ. ಸಲೀಂ (M.A. Salim) ಅವರು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ (Supreme Court) ಇತ್ತೀಚಿನ ತೀರ್ಪುಗಳ ಹಿನ್ನೆಲೆಯಲ್ಲಿ ಈ ಸೂಚನೆಗಳನ್ನು ಫೆಬ್ರವರಿ 7ರಂದು ಸುತ್ತೋಲೆಯ ಮೂಲಕ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಮತ್ತು ಅಧಿಕಾರಿಗಳಿಗೆ ಕಡ್ಡಾಯವಾಗಿ ಜಾರಿ ಮಾಡಲು ಆದೇಶಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುವ ಅಭಿಪ್ರಾಯ, ಟೀಕೆ ಅಥವಾ ರಾಜಕೀಯ (guidelines for FIR against social media posts) ಅಭಿವ್ಯಕ್ತಿಗಳ ಕುರಿತು ಅನಾವಶ್ಯಕವಾಗಿ ಪ್ರಕರಣ ದಾಖಲಿಸುವುದು ಹೆಚ್ಚಾಗುತ್ತಿರುವುದನ್ನು ಗಮನಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್‌ (Post) ಮೇಲೆ ಮೂರನೇ ವ್ಯಕ್ತಿಗಳು ದೂರು ನೀಡುವ ಮೂಲಕ ಕೇಸ್‌ ದಾಖಲಾಗುತ್ತಿರುವುದು ಕಂಡುಬಂದಿದೆ.

ಇದನ್ನು ತಪ್ಪಿಸಲು, ಮಾನಹಾನಿ ಸೇರಿದಂತೆ ಕೆಲವು ಅಪರಾಧಗಳಲ್ಲಿ ದೂರು ನೀಡುವವರು ಕಾನೂನಿನ ಪ್ರಕಾರ “ನೊಂದ ವ್ಯಕ್ತಿ” ಆಗಿರಬೇಕು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಸಂಬಂಧವಿಲ್ಲದ ವ್ಯಕ್ತಿಗಳು ಸಲ್ಲಿಸುವ ದೂರುಗಳನ್ನು ಗಂಭೀರ ಅಪರಾಧಗಳ ಹೊರತು ಸ್ವೀಕರಿಸಬಾರದು ಎಂದು ತಿಳಿಸಲಾಗಿದೆ.

ಈ ಮೂಲಕ ವೈಯಕ್ತಿಕ ದ್ವೇಷ, ರಾಜಕೀಯ ಪ್ರೇರಿತ ಅಥವಾ ಸುಳ್ಳು ದೂರುಗಳ ಮೂಲಕ ಕಾನೂನು ದುರುಪಯೋಗವಾಗುವುದನ್ನು ತಡೆಯುವ ಉದ್ದೇಶವನ್ನು ಪೊಲೀಸ್ ಇಲಾಖೆ ಹೊಂದಿದೆ.

ಹೊಸ ಮಾರ್ಗಸೂಚಿಯ ಪ್ರಕಾರ, ಯಾವುದೇ ಸಾಮಾಜಿಕ ಮಾಧ್ಯಮ ಪೋಸ್ಟ್‌ ಕುರಿತು ಎಫ್‌ಐಆರ್‌ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ಕಡ್ಡಾಯವಾಗಿದೆ.

ದೂರಿನಲ್ಲಿ ಉಲ್ಲೇಖಿಸಲಾದ ವಿಷಯವು ಮೇಲ್ನೋಟಕ್ಕೆ ಅಪರಾಧಕ್ಕೆ ಒಳಪಡುತ್ತದೆಯೇ ಎಂಬುದನ್ನು ಪರಿಶೀಲಿಸಿದ ಬಳಿಕವೇ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಲಾಗಿದೆ.

ದ್ವೇಷ ಭಾಷಣ, ಸಾರ್ವಜನಿಕ ಶಾಂತಿಗೆ ಧಕ್ಕೆ, ದೇಶದ್ರೋಹದಂತಹ ಗಂಭೀರ ಆರೋಪಗಳಿದ್ದರೂ ಸಹ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸ್ಪಷ್ಟ ಮತ್ತು ನೇರ ಸಾಕ್ಷ್ಯಗಳಿದ್ದಾಗ ಮಾತ್ರ ಎಫ್‌ಐಆರ್‌ ದಾಖಲಿಸಬೇಕು.

ಈ ಸಂದರ್ಭದಲ್ಲಿ ಕೇದಾರನಾಥ್ ಸಿಂಗ್ (Kedarnath Singh) ಹಾಗೂ ಶ್ರೇಯಾ ಸಿಂಘಾಲ್ (Shreya Singhal) ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪುಗಳನ್ನು ಪರಿಗಣಿಸುವಂತೆ ಸೂಚಿಸಲಾಗಿದೆ.

ರಾಜಕೀಯ ಟೀಕೆಗಳು ಮತ್ತು ಆಕ್ಷೇಪಾರ್ಹ ಭಾಷೆಯ ವಿಚಾರದಲ್ಲಿಯೂ ಪೊಲೀಸ್‌ ಅಧಿಕಾರಿಗಳು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕಠಿಣ ಅಥವಾ ಅಸಮಾಧಾನಕರ ರಾಜಕೀಯ ಪೋಸ್ಟ್‌ಗಳಿಗಾಗಿ ಯಾಂತ್ರಿಕವಾಗಿ ಪ್ರಕರಣ ದಾಖಲಿಸಬಾರದು. ಸಂವಿಧಾನದ 19(1)(ಎ) ವಿಧಿಯಡಿ ದೊರೆಯುವ ವಾಕ್‌ ಸ್ವಾತಂತ್ರ್ಯವನ್ನು ಗೌರವಿಸಬೇಕು. ಪೋಸ್ಟ್‌ನಿಂದ ಸಾರ್ವಜನಿಕ ಶಾಂತಿಗೆ ತಕ್ಷಣದ ಮತ್ತು ನೈಜ ಅಪಾಯವಿದ್ದರೆ ಮಾತ್ರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಾನಹಾನಿ ಪ್ರಕರಣವು ಅಸಂಜ್ಞೇಯ ಅಪರಾಧವಾಗಿರುವುದರಿಂದ, ಪೊಲೀಸರು ನೇರವಾಗಿ ಎಫ್‌ಐಆರ್‌ (FIR) ದಾಖಲಿಸುವಂತಿಲ್ಲ; ದೂರುದಾರರನ್ನು ನ್ಯಾಯಾಲಯದ ಮೊರೆ ಹೋಗುವಂತೆ ಮಾರ್ಗದರ್ಶನ ನೀಡಬೇಕು.

ಇದೇ ವೇಳೆ ಬಂಧನದ ವಿಷಯದಲ್ಲಿಯೂ ಸುಪ್ರೀಂ ಕೋರ್ಟ್‌ನ ಅರ್ನೇಶ್ ಕುಮಾರ್ ಪ್ರಕರಣದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಜಿ–ಐಜಿಪಿ ಸೂಚಿಸಿದ್ದಾರೆ. ಅನಗತ್ಯ ಅಥವಾ ತುರ್ತು ಬಂಧನಕ್ಕೆ ಅವಕಾಶವಿಲ್ಲ.

ರಾಜಕೀಯ ಅಥವಾ ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸುವ ಮೊದಲು ಸರ್ಕಾರಿ ಅಭಿಯೋಜಕರಿಂದ ಕಾನೂನು ಸಲಹೆ ಪಡೆಯುವುದು ಕಡ್ಡಾಯವಾಗಿದೆ.

ಒಂದು ವೇಳೆ ದೂರುಗಳು ಸುಳ್ಳು, ದ್ವೇಷಪೂರಿತ ಅಥವಾ ರಾಜಕೀಯ ಪ್ರೇರಿತ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದರೆ, ಅಂತಹ ಪ್ರಕರಣಗಳನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 176(1) ಅಡಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ : https://vijayatimes.com/pakistans-conditions-to-play-against-india/

Tags: FIRpolicepolicedepartmentsocialmedia

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.