ಹೃದಯಾಘಾತದಿಂದ ಕಾರಿಗೆ ಡಿಕ್ಕಿ ಹೊಡೆದ ಬಸ್ ಚಾಲಕ ; ಸ್ಥಳದಲ್ಲೇ 9 ಜನರು ಸಾವು!

New Delhi : ಗುಜರಾತ್‌ನ (Gujarath terrible Accident) ನವಸಾರಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಬಸ್ ಮತ್ತು ಎಸ್‌ಯುವಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಬಸ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಿಂದ ಒಂಬತ್ತು ಜನರು ಸಾವನ್ನಪಿದ್ದು, 28 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸೂರತ್‌ನಿಂದ (Surat) ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದ ಬಸ್,

ನವಸಾರಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತವಾಗಲು ಚಾಲಕನ (Gujarath terrible Accident) ಬೇಜವಾಬ್ದಾರಿ, ಅತಿಯಾದ ವೇಗ ಅಪಘಾತಕ್ಕೆ ಕಾರಣವಲ್ಲ!

ಚಾಲಕನಿಗೆ ಹೃದಯಾಘಾತ (Heart attack) ಸಂಭವಿಸಿದ ಕಾರಣ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂಬುದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

https://vijayatimes.com/hidden-number-plates/

ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಒಂಬತ್ತು ಮಂದಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ 28 ಮಂದಿ ಗಂಭೀರ ಗಾಯಗೊಂಡಿದ್ದಾರೆ. 11 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: https://vijayatimes.com/siddaramaiah-reacted-amitshahs-statement/

ಬಸ್ ಸೂರತ್‌ನಿಂದ ವಲ್ಸಾದ್‌ಗೆ ಪ್ರಯಾಣಿಸುತ್ತಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ. ಘಟನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra modi) ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಪರಿಹಾರ ಹಣ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ ಪ್ರಧಾನಿ ಅವರು,

ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಿಂದ ಬಹಳ ನೋವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ.

PMNRF ನಿಂದ ಪ್ರತಿಯೊಬ್ಬರ ಮುಂದಿನ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಹಣವನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ 50,000 ನೀಡಲಾಗುವುದು ಎಂದು ಟ್ವೀಟ್ (Tweet) ಮಾಡಿ ತಿಳಿಸಿದ್ದಾರೆ.

Exit mobile version