ನವದೆಹಲಿ : ಕಾಂಗ್ರೆಸ್ ಪಕ್ಷದ(Congress Party) ಹಿರಿಯ ನಾಯಕ ಗುಲಾಂ ನಬಿ ಆಜಾದ್(Gulam Nabi Azaad) ಕಾಂಗ್ರೆಸ್ ಪಕ್ಷದ ಪ್ರಾಥಮಿಕ ನಾಯಕತ್ವ ಸೇರಿದಂತೆ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆಯನ್ನು ಮತ್ತು ಐದು ಪುಟಗಳ ಟಿಪ್ಪಣಿಯನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರಿಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಗುಲಾಂ ನಬಿ ಆಜಾದ್ ಅವರು ತಮ್ಮ ಐದು ಪುಟಗಳ ಪತ್ರದಲ್ಲಿ ಪಕ್ಷದೊಂದಿಗಿನ ತಮ್ಮ ಸುದೀರ್ಘ ಒಡನಾಟ ಮತ್ತು ಇಂದಿರಾ ಗಾಂಧಿಯವರೊಂದಿಗಿನ (INDIRA GANDHI) ನಿಕಟ ಸಂಬಂಧವನ್ನು ವಿವರಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕಾಗಿ ತಾವು ಮಾಡಿರುವ ಕಾರ್ಯ ಮತ್ತು ಇತ್ತೀಚಿನ ದಿನಗಳಲ್ಲಿ ಪಕ್ಷದೊಳಗೆ ತಮ್ಮನ್ನು ನಡೆಸಿಕೊಳ್ಳುತ್ತಿರುದರ ಕುರಿತು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಮುಖ್ಯವಾಗಿ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ನಡೆಸುವ ಚುನಾವಣಾ ಪ್ರಕ್ರಿಯೆಯನ್ನು ತೀವ್ರವಾಗಿ ಟೀಕಿಸಿರುವ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಎಂಬುದು ಕೇವಲ `ಪ್ರಹಸನ ಮತ್ತು ನೆಪʼ ಮಾತ್ರ.
ಇದನ್ನೂ ಓದಿ : https://vijayatimes.com/facts-about-tree/
ಅದರಿಂದ ಪಕ್ಷದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದಿನೇದಿನೇ ಕಾಂಗ್ರೆಸ್‌ಪಕ್ಷವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದರು, ಯಾವುದೇ ಕ್ರಮವನ್ನು ಪಕ್ಷದ ವರಿಷ್ಠರು ತೆಗೆದುಕೊಂಡಿಲ್ಲ. ಈ ಕುರಿತು ಪಕ್ಷದ ವರಿಷ್ಠರು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಾಗಿದ್ದು, ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್‌ನಿಂದಲೇ ಜಮ್ಮು-ಕಾಶ್ಮೀರದಲ್ಲಿ (JAMMU-KASHMIR)ಮುಖ್ಯಮಂತ್ರಿಯೂ ಆಗಿದ್ದರು, ಕೇಂದ್ರದಲ್ಲಿ ಸಚಿವರು ಆಗಿದ್ದರು.
https://fb.watch/f8cnvyGaPe/ ಟ್ರಾಫಿಕ್ ಪೊಲೀಸ್ ರೌಡಿಸಂ!