ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ; ಜ್ಞಾನವಾಪಿ ಮಸೀದಿ ಸಮೀಕ್ಷೆ ಮುಂದುವರಿಕೆ

Allahabad: ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ (Gyanvapi Survey Continued) ಇಲಾಖೆಗೆ (ಎಎಸ್ಐ) ಅವಕಾಶ ನೀಡಿದ್ದ ವಾರಣಾಸಿ

ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ (High Court) ಎತ್ತಿ ಹಿಡಿದಿದೆ. ಅಂಜುಮನ್ ಇಂತೇಜಾಮಿಯಾ ಮಸೀದಿ (Anjuman Intejamia) ಸಮಿತಿಯ ಮನವಿಯನ್ನು

ವಜಾಗೊಳಿಸಿದ ಹೈಕೋರ್ಟ್, ಸಮೀಕ್ಷೆಯನ್ನು ತಕ್ಷಣವೇ (Gyanvapi Survey Continued) ಪುನರಾರಂಭಿಸಬಹುದು ಎಂದು ಹೇಳಿದೆ.

ನ್ಯಾಯದ ಹಿತದೃಷ್ಟಿಯಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಮೀಕ್ಷೆ ಅಗತ್ಯವಾಗಿದೆ. ಕೆಲವು ಷರತ್ತುಗಳ ಅಡಿಯಲ್ಲಿ ಅದನ್ನು ನಡೆಸಬೇಕಾಗಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ಇನ್ನು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಪ್ರಾರಂಭಿಸಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ

ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ (Vishnu Shankar Jain) ಮಾದ್ಯಮಗಳಿಗೆ ತಿಳಿಸಿದ್ದಾರೆ.

ದೇಶದಲ್ಲಿರುವ 20 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ (Keshav Prasad Maurya) ಅವರು, “ನಾನು ಈ ತೀರ್ಪನ್ನು ಸ್ವಾಗತಿಸುತ್ತೇನೆ,

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಮೀಕ್ಷೆಯ ನಂತರ ಸತ್ಯ ಹೊರಬರುತ್ತದೆ ಮತ್ತು ಜ್ಞಾನವಾಪಿ ಸಮಸ್ಯೆಯನ್ನು ಪರಿಹರಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಜುಲೈ 21 ರಂದು ವಾರಣಾಸಿ ನ್ಯಾಯಾಲಯವು ಸಮೀಕ್ಷೆಗೆ ನಿರ್ದೇಶನ ನೀಡಿತು. ದೇವಾಲಯವಿದ್ದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು, ಅಗತ್ಯವಿರುವಲ್ಲೆಲ್ಲಾ ಉತ್ಖನನ ಸೇರಿದಂತೆ

ಸಮೀಕ್ಷೆಯನ್ನು ನಡೆಸುವಂತೆ ಆದೇಶ ನೀಡಿತ್ತು. ಎಎಸ್ಐ ಜುಲೈ 24 ರಂದು ಸಮೀಕ್ಷೆಯನ್ನು ಪ್ರಾರಂಭಿಸಿತ್ತು, ಆದರೆ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ನಂತರ ಕೆಲವೇ ಗಂಟೆಗಳಲ್ಲಿ ಸುಪ್ರೀಕೋರ್ಟ್

(Supreme Court) ಸಮೀಕ್ಷೆಗೆ ತಡೆ ನೀಡಿ, ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಮಿತಿಗೆ ಸಮಯಾವಕಾಶ ನೀಡಿತು. ಸರ್ವೆ ಮತ್ತು ಉತ್ಖನನದಿಂದ ಕಟ್ಟಡಕ್ಕೆ ಹಾನಿಯಾಗುತ್ತದೆ ಎಂದು

ಮಸೀದಿ ಸಮಿತಿ ಪರ ವಕೀಲರು ಆತಂಕ ವ್ಯಕ್ತಪಡಿಸಿದ್ದರು. ಸಮೀಕ್ಷೆಯು ರಚನೆಯನ್ನು ಯಾವುದೇ ರೀತಿಯಲ್ಲಿ ಬದಲಾಯಿಸುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ. ಹೀಗಾಗಿ

ಹೈಕೋರ್ಟ್ ಇದೀಗ ಸಮೀಕ್ಷೆಗೆ ಅವಕಾಶ ನೀಡಿದೆ.

Exit mobile version