Visit Channel

‘H/34 ಪಲ್ಲವಿ ಟಾಕೀಸ್’ ಹಾಡು ಬಿಡುಗಡೆ

WhatsApp Image 2021-05-28 at 12.31.04 PM

ನಟ ತಿಲಕ್ ಅಭಿನಯದ “H/34 ಪಲ್ಲವಿ ಟಾಕೀಸ್” ಚಿತ್ರದ “ಬರೆವೆ ಬರೆವೆ ಒಲವ ಕವನ” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶ್ರೀನಿವಾಸ್ ಚಿಕ್ಕಣ್ಣ ಬರೆದಿರುವ ಈ ಹಾಡನ್ನು ಬಾಲಿವುಡ್‌ ನ ಜನಪ್ರಿಯ ಗಾಯಕ ಅಂಕಿತ್ ತಿವಾರಿ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಗುರುವಾರ ಬಿಡುಗಡೆಯಾಗಿರುವ ಈ ಹಾಡಿಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆಗಲಿದೆ. ಜೂನ್ ಎರಡನೇ ವಾರದಲ್ಲಿ ಓ ಟಿ ಟಿ ಫ್ಲಾಟ್ ಫಾರಂ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಕಾಲಭೈರವ ಆರ್ಟ್ಸ್ ಲಾಂಛನದಲ್ಲಿ ಮಂಜುನಥ್ ಕೆ ಹಾಗೂ ರವಿಕಿರಣ್ ಎಂ ಗೌಡ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಚಿಕ್ಕಣ್ಣ ನಿರ್ದೇಶಿಸಿದ್ದಾರೆ. ಈ ಹಿಂದೆ “6ನೇ ಮೈಲಿ” ಚಿತ್ರವನ್ನು ನಿರ್ದೇಶಿಸಿದ್ದ, ಶ್ರೀನಿವಾಸ್ ಚಿಕ್ಕಣ್ಣ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ.

ಹಾರರ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ ರಾವ್ ಸಂಕಲನ ಈ ಚಿತ್ರಕ್ಕಿದೆ.

ತಿಲಕ್ ಅವರಿಗೆ ನಾಯಕಿಯಾಗಿ ಯಜ್ಞಾ ಶೆಟ್ಟಿ ಅಭಿನಯಿಸಿದ್ದಾರೆ. ಸಚೇಂದ್ರ ಪ್ರಸಾದ್, ಅವಿನಾಶ್, ಸುಧಾ ಬೆಳವಾಡಿ, ಅಚ್ಯುತಕುಮಾರ್, ಪದ್ಮಜಾರಾವ್, ಕುರಿ ಪ್ರತಾಪ್, ವಿಶ್ವ, ಅಮೃತ ಮಯೂರಿ, ರಾಜೇಶ್ವರಿ, ರಾಕ್ ಲೈನ್ ಸುಧಾಕರ್, ಅಜಯ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.