vijaya times advertisements
Visit Channel

ಜೆಡಿಎಸ್‌ ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ – ದೇವೇಗೌಡ

file72t35ozrmaf11pc5lle5-1561876920

ಬೆಂಗಳೂರು ಸೆ 27 :  ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ ಎಂದು ಹೆಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

ಜೆಡಿಎಸ್ ಅವರಿವರ ಜೊತೆ ಸೇರುವ ಪಕ್ಷ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ನಿನ್ನೆಯಷ್ಟೇ ಟ್ವೀಟ್ ಮಾಡಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಕ ಈಗ ಮಾಜಿ ಪ್ರಧಾನಿ 2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.O’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ.

ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲಿ ಉತ್ತರ ನೀಡೋಣ ಎಂದು ತಿಳಿಸಿದ್ದಾರೆ.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.