ಬೆಂಗಳೂರು ಸೆ 24 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ನೂತನ ಸದಸ್ಯನ ಎಂಟ್ರಿ ಆಗಿದೆ. ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಹಿನ್ನಲೆಯಲ್ಲಿ ದೇವೆಗೌಡರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ನಿನ್ನ ಜೀವನದ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಲವ್ ಯು ಮೈ ಸನ್ ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಸಂತಸವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದು “ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ”. ಎಂದು ಟ್ವೀಟ್ ಮಾಡಿದ್ದಾರೆ.