• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
0
SHARES
8
VIEWS
Share on FacebookShare on Twitter

ಬೆಂಗಳೂರು ಸಮೀಪ (H5N1 virus found in chicken) ಹಕ್ಕಿ ಜ್ವರ ಪತ್ತೆ – ಆರೋಗ್ಯ ಇಲಾಖೆ ಎಚ್ಚರಿಕೆ

ಕೋಳಿ ಶೆಡ್‌ಗಳು, ಅಂಗಡಿಗಳ ಮೇಲೆ ವಿಶೇಷ ನಿಗಾವಳಿ, ಸಾಕಾಣೆಗಾರರಿಗೆ ಸೂಚನೆ

ಸೋಂಕು ಹರಡುವ ಭೀತಿ ಹಿನ್ನೆಲೆ ಕೋಳಿ ಸಾಕಾಣೆಗಾರರ ಕ್ವಾರಂಟೈನ್, ವ್ಯಾಪಕ ಪರಿಶೀಲನೆ ಆರಂಭ

Bengaluru : ರಾಜ್ಯದ ಚಿಕನ್ ಪ್ರಿಯರಿಗೆ ಆತಂಕ ಮೂಡಿಸುವ (H5N1 virus found in chicken) ಸುದ್ದಿ ಹೊರಬಿದ್ದಿದೆ. ರಾಜ್ಯಕ್ಕೆ ಹಕ್ಕಿ ಜ್ವರ (Bird Flu) ಹರಡುವ ಸಾಧ್ಯತೆ ಇರುವ H5N1 ವೈರಸ್ ಪತ್ತೆಯಾಗಿರುವುದು ಆರೋಗ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಗೆ ಚಿಂತೆ ತಂದಿದೆ.

ಮೊದಲ ಹಂತದ ತಪಾಸಣೆಯಲ್ಲಿಯೇ ಈ ಅಪಾಯಕಾರಿ ವೈರಸ್ ಕಂಡುಬಂದಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣವೇ ಜಾರಿಗೆ ತರಲಾಗಿದೆ.

ಹಕ್ಕಿಗಳಲ್ಲಿ ವೇಗವಾಗಿ ಹರಡುವ ಈ ಸೋಂಕು ಮಾನವರಿಗೂ ಅಪಾಯಕಾರಿಯಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಹೆಚ್ಚು ಎಚ್ಚರಿಕೆಯಿಂದ ಕ್ರಮಗಳನ್ನು ಕೈಗೊಳ್ಳುತ್ತಿದೆ.

H5N1 virus found in chicken

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಮೇರೆಗೆ ಬೆಂಗಳೂರು ಸಮೀಪದ ಹೆಸರಘಟ್ಟದಲ್ಲಿರುವ (H5N1 virus found in chicken) ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಪರಿಶೀಲನೆ ನಡೆಸಿದಾಗ H5N1 ವೈರಸ್ (Virus) ಸೋಂಕು ದೃಢಪಟ್ಟಿದೆ.

ಇದರಿಂದಾಗಿ ಅಲ್ಲಿ ಸಾಕಲಾಗುತ್ತಿದ್ದ ಕೋಳಿಗಳನ್ನು ಮುಂಜಾಗ್ರತಾ ಕ್ರಮವಾಗಿ ಸಂಹರಿಸಿ, ಗುಂಡಿ ತೋಡಿ ಸುರಕ್ಷಿತವಾಗಿ ಮಣ್ಣಿನಡಿಯಲ್ಲಿ ಮುಚ್ಚಲಾಗಿದೆ.

ಈ ಕ್ರಮವು ವೈರಸ್ ಇನ್ನಷ್ಟು ವ್ಯಾಪಕವಾಗಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೈಗೊಳ್ಳಲಾಗಿದೆ. ಪೌಲ್ಟ್ರಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೂ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.

ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆಯಲ್ಲಿ, ಸೋಂಕು ಬೇರೆ ಪ್ರದೇಶಗಳಿಗೆ ಹರಡುವ ಭೀತಿ ಹೆಚ್ಚಾಗಿದೆ.

ಇದನ್ನು ಗಮನದಲ್ಲಿಟ್ಟುಕೊಂಡು ಪಶುವೈದ್ಯಾಧಿಕಾರಿಗಳು ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಿಗೆ ಎಚ್ಚರಿಕಾ ನೋಟಿಸ್ ನೀಡಿದ್ದು, ಕೋಳಿ ಸಾಕಾಣಿಕೆ ಶೆಡ್‌ಗಳು ಹಾಗೂ

ಕೋಳಿ ಮಾರಾಟ ಮಳಿಗೆಗಳಲ್ಲಿ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ವರದಿ ಮಾಡಲು ಸೂಚನೆ ನೀಡಲಾಗಿದೆ.

ಇದೇ ವೇಳೆ, ಸೋಂಕು ಪತ್ತೆಯಾದ ಪ್ರದೇಶದ ಸುತ್ತಮುತ್ತಲಿನ ಕೋಳಿ ಸಾಕಾಣೆಗಾರರನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೊರಗಿನವರ ಸಂಚಾರಕ್ಕೂ ಕೆಲವು ಮಟ್ಟಿನ ನಿರ್ಬಂಧ

ವಿಧಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಕಾರ್ಯಾಚರಣೆ ನಡೆಸುತ್ತಿವೆ.

ತಾಪಮಾನ ಹೆಚ್ಚಿರುವ ಈ ಕಾಲಘಟ್ಟದಲ್ಲೂ ವೈರಸ್ ಕಾಣಿಸಿಕೊಂಡಿರುವುದು ಅಧಿಕಾರಿಗಳಲ್ಲಿ ಇನ್ನಷ್ಟು ಜಾಗೃತಿಯನ್ನು ಹೆಚ್ಚಿಸಿದೆ.

ಸಾಮಾನ್ಯ ಜನರು ಭಯಪಡುವ ಅಗತ್ಯವಿಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಚೆನ್ನಾಗಿ ಬೇಯಿಸಿದ ಕೋಳಿ ಮಾಂಸ ಹಾಗೂ ಮೊಟ್ಟೆಗಳನ್ನು ಮಾತ್ರ ಸೇವಿಸುವುದು, ಅಸ್ವಸ್ಥ ಹಕ್ಕಿಗಳ ಸಂಪರ್ಕ ತಪ್ಪಿಸುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಲು ಸಲಹೆ ನೀಡಲಾಗಿದೆ.

ಸರ್ಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಹಕ್ಕಿ ಜ್ವರದ ಹರಡುವಿಕೆಯನ್ನು ನಿಯಂತ್ರಿಸಲು ಸಾಧ್ಯವಿದೆ.

Tags: biedfluchickenH5N1infectionvirus

Related News

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
ಪ್ರಮುಖ ಸುದ್ದಿ

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ

May 18, 2026
ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ
ದೇಶ-ವಿದೇಶ

ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ

May 18, 2026
ಚಿನ್ನದ ಹೂಡಿಕೆಗೆ ಹೊಸ ದಾರಿ: ಇಜಿಆರ್‌ ಮೂಲಕ ಡಿಜಿಟಲ್ ಬಂಗಾರಕ್ಕೆ ಹೆಚ್ಚಿದ ಬೇಡಿಕೆ
ದೇಶ-ವಿದೇಶ

ಚಿನ್ನದ ಹೂಡಿಕೆಗೆ ಹೊಸ ದಾರಿ: ಇಜಿಆರ್‌ ಮೂಲಕ ಡಿಜಿಟಲ್ ಬಂಗಾರಕ್ಕೆ ಹೆಚ್ಚಿದ ಬೇಡಿಕೆ

May 18, 2026
ಪೊಲೀಸ್ ಕಸ್ಟಡಿ ದೌರ್ಜನ್ಯಕ್ಕೆ ಬ್ರೇಕ್ : ರಾಜ್ಯದಲ್ಲಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ
ಪ್ರಮುಖ ಸುದ್ದಿ

ಪೊಲೀಸ್ ಕಸ್ಟಡಿ ದೌರ್ಜನ್ಯಕ್ಕೆ ಬ್ರೇಕ್ : ರಾಜ್ಯದಲ್ಲಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ

May 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.