ಹಳೆಯ ಮೈಸೂರು ಪ್ರಾಂತ್ಯಕ್ಕೆ ಆದ ಅನ್ಯಾಯ: ಸಚಿವ ‌ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಾಮದಾಸ್ ಬೇಸರ

ಮೈಸೂರು, ಜ. 13: ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಎಸ್.ಎ. ರಾಮದಾಸ್, ಹಳೆಯ ಮೈಸೂರು ಪ್ರಾಂತ್ಯಕ್ಕೆ ಆದ ಅನ್ಯಾಯ ಎಂದಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ನಾನು ಮೈಸೂರು ನಗರದ ಯುವಮೋರ್ಚಾ ಅಧ್ಯಕ್ಷನಾಗಿ ಪಕ್ಷದ ಕೆಲಸ ಪ್ರಾರಂಭ ಮಾಡಿದವನು. ರಾಜ್ಯದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನಾಗಿ ಸತತ 2 ಬಾರಿ ಕೆಲಸ ಮಾಡಿದವನು. ಸತತ 28 ವರ್ಷಗಳಿಂದ ಸಾಕಷ್ಟು ನಿಷ್ಠೆಯಿಂದ ಪಕ್ಷದ ಕೆಲಸ ಮಾಡುತ್ತಿದ್ದೇನೆ
ವಿಭಾಗದಲ್ಲಿ ಗೆದ್ದ 11 ಜನ ಬಿಜೆಪಿ ಶಾಸಕರಲ್ಲಿ 10 ಜನ ಪಕ್ಷ ಬಿಟ್ಟು ಅನ್ಯ ಪಕ್ಷಕ್ಕೆ ತೆರಳಿದರು.

ನಾನು ಪಕ್ಷದ ಶಾಸಕನಾಗಿ, ಪಕ್ಷ ನನ್ನ ತಾಯಿ, ಅದರ ಘನತೆ ನನ್ನ ಕರ್ತವ್ಯ ಎಂದು ಅರಿತವನು.
ನಾನೊಬ್ಬ ನಿಜವಾದ ಸ್ವಯಂ ಸೇವಕ, ಅನ್ಯ ಮಾರ್ಗದಲ್ಲಿ ಸಚಿವನಾಗುವುದು ನನ್ನ ಆತ್ಮ ಸಾಕ್ಷಿಗೆ ವಿರುದ್ಧವಾದುದು. ಹಳೆಯ ಮೈಸೂರು ಪ್ರಾಂತ್ಯಕ್ಕೆ ಆದ ಅನ್ಯಾಯ.! ಜಿಲ್ಲೆಯ ಬೇರೆ ಯಾರನ್ನಾದರೂ ಮಂತ್ರಿ ಮಾಡಬಹುದಿತ್ತು ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ರಾಮದಾಸ್ ಬೇಸರ ಹೊರ ಹಾಕಿದ್ದಾರೆ.

Exit mobile version